ಭಾನುವಾರ, ಜುಲೈ 25, 2021
22 °C

ಮೈಸೂರಿನಲ್ಲಿ 51 ಮಂದಿ ಪೊಲೀಸರಿಗೆ ಕೋವಿಡ್, ಠಾಣೆಗೆ ಸಾರ್ವಜನಿಕರ ಪ್ರವೇಶ ನಿರ್ಬಂಧ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮೈಸೂರು: ಮೈಸೂರು ಜಿಲ್ಲೆಯ ಪೊಲೀಸ್ ಠಾಣೆಗಳಿಗೆ ಸಾರ್ವಜನಿಕರ ಪ್ರವೇಶವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.

‘ಜಿಲ್ಲೆಯಲ್ಲಿ ಈವರೆಗೆ 51 ಪೊಲೀಸರಲ್ಲಿ ಸೋಂಕು ಕಾಣಿಸಿಕೊಂಡಿದ್ದು, 5 ಠಾಣೆಗಳನ್ನು ಸೀಲ್‌ಡೌನ್‌ ಮಾಡಲಾಗಿದೆ. ಹೀಗಾಗಿ, ಈ ತೀರ್ಮಾನ ಕೈಗೊಳ್ಳಲಾಗಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್ ತಿಳಿಸಿದ್ದಾರೆ.

ಠಾಣೆ ಹೊರಗೆ ಸಹಾಯ ಕೇಂದ್ರ ಸ್ಥಾಪಿಸಲಾಗಿದ್ದು, ಸಾರ್ವಜನಿಕರು ತಮ್ಮ ದೂರುಗಳನ್ನು ಇಲ್ಲಿಯೇ ಸಲ್ಲಿಸಬೇಕು. ಅನಿವಾರ್ಯ ಎನಿಸಿದರೆ ದೂರವಾಣಿ ಮೂಲಕ ಸಂಪರ್ಕಿಸಬಹುದು. ಯಾವುದೇ ಕಾರಣಕ್ಕೂ ಠಾಣೆ ಪ್ರವೇಶಿಸಬಾರದು ಎಂದು ಸೂಚನೆ ನೀಡಿದ್ದಾರೆ.

‘ನೂರಕ್ಕೂ ಅಧಿಕ ಪೊಲೀಸರು ಕ್ವಾರಂಟೈನ್‌ನಲ್ಲಿ ಇದ್ದಾರೆ. ಮೈಸೂರು ನಗರ ಸಂಚಾರ ವಿಭಾಗದ ಎಸಿಪಿ ಕಚೇರಿ, ಎಚ್.ಡಿ.ಕೋಟೆ, ತಿ.ನರಸೀಪುರ, ನಂಜನಗೂಡು ಗ್ರಾಮಾಂತರ ಹಾಗೂ ನಗರ ಪೊಲೀಸ್ ಠಾಣೆಗಳನ್ನು ಸೀಲ್‌ಡೌನ್‌ ಮಾಡಲಾಗಿದೆ. ಪರಿಸ್ಥಿತಿ ಇದೇ ರೀತಿ ಮುಂದುವರೆದರೆ ಕಾನೂನು ಸುವ್ಯವಸ್ಥೆ ಪಾಲನೆ ಕಷ್ಟವಾಗಬಹುದು’ ಎಂದು ರಿಷ್ಯಂತ್‌ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು