ಲೈಂಗಿಕ ದೌರ್ಜನ್ಯ ಎಸಗಿದ ವೃದ್ಧನಿಗೆ ಶಿಕ್ಷೆ

ಗುರುವಾರ , ಜೂನ್ 20, 2019
26 °C
ಪೋಷಕರ ಅತಿಯಾದ ನಿರೀಕ್ಷೆಗೆ ಬೇಸರಗೊಂಡು ಆತ್ಮಹತ್ಯೆ

ಲೈಂಗಿಕ ದೌರ್ಜನ್ಯ ಎಸಗಿದ ವೃದ್ಧನಿಗೆ ಶಿಕ್ಷೆ

Published:
Updated:

ಮೈಸೂರು: 16 ವರ್ಷ ವಯಸ್ಸಿನ ಬುದ್ದಿಮಾಂದ್ಯ ಮತ್ತು ಅಂಗವಿಕಲ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ 65 ವರ್ಷದ ಸಿದ್ಧನಾಯಕ ಎಂಬಾತನಿಗೆ ಇಲ್ಲಿನ ಪೊಕ್ಸೊ ವಿಶೇಷ ನ್ಯಾಯಾಲಯವು 10 ವರ್ಷ ಕಠಿಣ ಸಜೆ ಹಾಗೂ ₹ 30 ಸಾವಿರ ದಂಡ ವಿಧಿಸಿದೆ.

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದುದ್ದನ್ನು ಕಂಡ ಬಾಲಕಿಯ ಚಿಕ್ಕಪ್ಪ ಮೊಬೈಲ್‌ನಲ್ಲಿ ಚಿತ್ರೀಕರಿಸಿಕೊಂಡು 2018ರ ಜನವರಿ 24ರಂದು ಜಿಲ್ಲೆಯ ಪೊಲೀಸ್‌ ಠಾಣೆಯೊಂದರಲ್ಲಿ ದೂರು ದಾಖಲಿಸಿದ್ದರು. ಸಿದ್ಧನಾಯಕನನ್ನು ಬಂಧಿಸಿದ ಪೊಲೀಸರು ನ್ಯಾಯಾಲಯದಲ್ಲಿ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಬಿ.ಎಸ್.ಜಯಶ್ರೀ ಅವರು ಶಿಕ್ಷೆ ವಿಧಿಸಿದ್ದಾರೆ. ಸರ್ಕಾರದ ಪರವಾಗಿ ಪಬ್ಲಿಕ್ ಪ್ರಾಸಿಕ್ಯೂಟರ್‌ ಬಿ.ಸಿ.ಶಿವರುದ್ರಸ್ವಾಮಿ ವಾದ ಮಂಡಿಸಿದ್ದರು.

ಅತಿ ನಿರೀಕ್ಷೆಗೆ ಜೀವ ತೆತ್ತಳು

ಮೈಸೂರು: ಪೋಷಕರು ನಿರೀಕ್ಷಿಸಿದಷ್ಟು ಓದಿನಲ್ಲಿ ಸಾಧನೆ ಮಾಡಲು ಸಾಧ್ಯವಾಗಲಿಲ್ಲ ಎಂದು ಮನನೊಂದ ಹೂಟಗಳ್ಳಿಯ ವಿದ್ಯಾರ್ಥಿನಿಯೊಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬಿ.ಕಾಂ ವ್ಯಾಸಂಗ ಮಾಡುತ್ತಿದ್ದ ಮಾನ್ಯಾ (21) ಆತ್ಮಹತ್ಯೆ ಮಾಡಿಕೊಂಡವರು. ಪೋಷಕರ ನಿರೀಕ್ಷೆಯಷ್ಟು ಪ್ರಮಾಣದಲ್ಲಿ ಓದಿನಲ್ಲಿ ಪ್ರಗತಿ ಸಾಧಿಸಲು ಆಗುತ್ತಿಲ್ಲ ಎಂದು ಅವರು ಪತ್ರ ಬರೆದಿಟ್ಟು ನೇಣಿಗೆ ಶರಣಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ವಿಜಯನಗರ ಠಾಣೆಯಲ್ಲಿ ದಾಖಲಾಗಿದೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !