ಗುರುವಾರ , ಅಕ್ಟೋಬರ್ 29, 2020
27 °C
ಮೈಸೂರು ನಗರ, ಜಿಲ್ಲಾ ಕಾಂಗ್ರೆಸ್‌ನಿಂದ ಪ್ರತಿಭಟನೆ

ಸಂಸ್ಥೆಯ ದುರುಪಯೋಗ ಆರೋಪ: ಡಿಕೆಶಿ ಮನೆ ಮೇಲೆ ಸಿಬಿಐ ದಾಳಿಗೆ ಖಂಡನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮೈಸೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರ ಮನೆ ಮೇಲೆ ನಡೆದ ಸಿಬಿಐ ದಾಳಿಯನ್ನು ಖಂಡಿಸಿ ಮೈಸೂರು ನಗರ ಹಾಗೂ ಜಿಲ್ಲಾ ಕಾಂಗ್ರೆಸ್‌ ವತಿಯಿಂದ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.

ಕಾಂಗ್ರೆಸ್‌ ಭವನದ ಮುಂದೆ ಸೇರಿದ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ದಾಳಿಗೆ ಆಕ್ರೋಶ ವ್ಯಕ್ತಪಡಿಸಿದರು.

ಸಿಬಿಐ ಸಂಸ್ಥೆಯನ್ನು ದುರುಪಯೋಗ ಮಾಡುತ್ತಿರುವ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ವಿರುದ್ಧ ಧಿಕ್ಕಾರ ಕೂಗಿದರು. ಬಿಜೆಪಿ ತೊಲಗಲಿ, ದ್ವೇಷ ರಾಜಕಾರಣ ಮಾಡುತ್ತಿರುವ ಬಿಜೆಪಿ ಸರ್ಕಾರಕ್ಕೆ ಧಿಕ್ಕಾರ ಎಂಬ ಘೋಷಣೆಗಳು ಮೊಳಗಿದವು.

ಮುಖಂಡ ಎಂ.ಕೆ.ಸೋಮಶೇಖರ್‌ ಮಾತನಾಡಿ, ಡಿಕೆಶಿ ನಾಯಕತ್ವದಲ್ಲಿ ಕಾಂಗ್ರೆಸ್‌ನ ಬೆಳವಣಿಗೆಯನ್ನು ಕಂಡು ಹೆದರಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಇಂತಹ ನೀಚ ಕೆಲಸಕ್ಕೆ ಕೈಹಾಕಿದೆ. ಉಪಚುನಾವಣೆಯಲ್ಲಿ ಸೋಲುವ ಭಯದಿಂದ ಈ ದಾಳಿ ಮಾಡಿಸಿದೆ ಎಂದು ಅವರು ಟೀಕಿಸಿದರು.

ವಾಸು ಮಾತನಾಡಿ, ಶಿರಾ ಉಪಾಚುನಾವಣೆಯಲ್ಲಿ ಕಾಂಗ್ರೆಸ್‌ ಗೆಲುವಿಗೆ ಡಿಕೆಶಿ ತಂತ್ರ ಹೆಣೆಯುತ್ತಿದ್ದಾರೆ. ಶಿರಾದಲ್ಲಿರುವ ಬಿಜೆಪಿ ನಾಯಕರು ಕಾಂಗ್ರೆಸ್‌ ಸೇರಲು ಮುಂದಾಗಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಈ ಕಾರಣ ಸಿಬಿಐ ಮೂಲಕ ದಾಳಿ ಮಾಡಿದೆ ಎಂದು ದೂರಿದರು.

ರಾಜ್ಯ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ಪುಷ್ಪಾ ಅಮರನಾಥ್, ಕೆಪಿಸಿಸಿ ವಕ್ತಾರ ರಾದ ಎಂ.ಲಕ್ಷ್ಮಣ, ಮಂಜುಳಾ ಮಾನಸ, ಕಾಂಗ್ರೆಸ್‌ ನಗರಾಧ್ಯಕ್ಷ ಆರ್‌.ಮೂರ್ತಿ, ಜಿಲ್ಲಾ ಘಟಕದ ಅಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್, ಮುಖಂಡರಾದ ಸೀತಾರಾಮ್, ಪುಷ್ಪಲತಾ ಚಿಕ್ಕಣ್ಣ ಪಾಲ್ಗೊಂಡರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು