ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿರಿಯಾಪಟ್ಟಣದಲ್ಲಿ ಆಲಿಕಲ್ಲು ಮಳೆ

Last Updated 19 ಮೇ 2019, 10:35 IST
ಅಕ್ಷರ ಗಾತ್ರ

ಮೈಸೂರು: ಜಿಲ್ಲೆಯ ಪಿರಿಯಾಪಟ್ಟಣ, ನಂಜನಗೂಡು, ತಿ.ನರಸೀಪುರ, ಹುಣಸೂರು ಮತ್ತು ಎಚ್.ಡಿ.ಕೋಟೆ ತಾಲ್ಲೂಕುಗಳಲ್ಲಿ ಶುಕ್ರವಾರ ಸಾಧಾರಣ ಮಳೆಯಾಗಿದೆ.

ಹಲವೆಡೆ ಮಳೆಯಿಂದ ಜೋಳ, ತೊಗರಿ, ಅಲಸಂದೆ, ಹೆಸರು, ಉದ್ದು, ಎಳ್ಳು, ಹೊಗೆಸೊಪ್ಪು ಹಾಗೂ ಹತ್ತಿ ಬೆಳೆಗಳಿಗೆ ಸಹಕಾರಿಯಾಗಿದೆ. ತೋಟಗಾರಿಕಾ ಬೆಳೆಗಳೂ ಜೀವ ಪಡೆಯುವಂತಾಗಿದೆ. ಕೊಳವೆಬಾವಿಗಳಲ್ಲಿ ನೀರು ಹೆಚ್ಚುವ ನಿರೀಕ್ಷೆ ಇದೆ.

ಪಿರಿಯಾಪಟ್ಟಣದಲ್ಲಿ ಬೀಸಿದ ಬಿರುಗಾಳಿಗೆ ಮೂರು ಮರಗಳು ಧರೆಗುರುಳಿವೆ. ಇದರಿಂದ ಕುಶಾಲನಗರ ಮತ್ತು ಪಿರಿಯಾಪಟ್ಟಣ ರಸ್ತೆಯಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿತು. ತಂಬಾಕು ಸಸಿಗಳಿಗೆ ಆಲಿಕಲ್ಲು ಮಳೆಯಿಂದ ಹಾನಿಯಾಗಿದೆ.

ಎಚ್.ಡಿ.ಕೋಟೆ ತಾಲ್ಲೂಕಿನ ಹಂಪಾಪುರದಲ್ಲಿ ಬಿರುಗಾಳಿ ಮಳೆಗೆ ಹಲವೆಡೆ ಬಾಳೆ ಮತ್ತು ಕಬ್ಬು ಬೆಳೆಗಳು ನಾಶಗೊಂಡಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT