ಸೋಮವಾರ, ಅಕ್ಟೋಬರ್ 26, 2020
20 °C
ಮೈಸೂರು ಜಿಲ್ಲಾ ಸಹಕಾರಿ ಯೂನಿಯನ್ ಚುನಾವಣೆ

ಮೈಸೂರು ಜಿಲ್ಲಾ ಸಹಕಾರಿ ಯೂನಿಯನ್ ಚುನಾವಣೆ: ರಾಜೀವ್ ಸತತ 4ನೇ ಬಾರಿಗೆ ಅಧ್ಯಕ್ಷ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮೈಸೂರು: ಮೈಸೂರು ಜಿಲ್ಲಾ ಸಹಕಾರಿ ಯೂನಿಯನ್‌ನ ಅಧ್ಯಕ್ಷರಾಗಿ, ಮುಡಾ ಅಧ್ಯಕ್ಷ ಎಚ್‌.ವಿ.ರಾಜೀವ್ ಸತತ ನಾಲ್ಕನೇ ಬಾರಿಗೆ ಆಯ್ಕೆಯಾದರು.

ಸೆಪ್ಟೆಂಬರ್‌ನಲ್ಲಿ ಮೈಸೂರು ಜಿಲ್ಲಾ ಸಹಕಾರಿ ಯೂನಿಯನ್‌ಗೆ ನಿರ್ದೇಶಕರ ಆಯ್ಕೆ ನಡೆದಿತ್ತು. ಸೋಮವಾರ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆ ನಡೆಯಿತು.

ಜಿಲ್ಲಾ ಸಹಕಾರಿ ಕ್ಷೇತ್ರದ ಹಿರಿಯ ಮುಖಂಡ, ಜೆಡಿಎಸ್‌ ಶಾಸಕ ಜಿ.ಟಿ.ದೇವೇಗೌಡರ ಸಾರಥ್ಯದಲ್ಲಿ ಯೂನಿಯನ್‌ನ ಅಧ್ಯಕ್ಷ, ಉಪಾಧ್ಯಕ್ಷರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.

ಸಹಕಾರಿ ಯೂನಿಯನ್‌ನಲ್ಲಿ ತಮ್ಮದೇ ಛಾಪು ಮೂಡಿಸಿರುವ ಎಚ್‌.ವಿ.ರಾಜೀವ್ ಅವರನ್ನು ಮುಂದಿನ ಐದು ವರ್ಷದ ಅವಧಿಗೆ ಅಧ್ಯಕ್ಷರನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.

ಉಪಾಧ್ಯಕ್ಷರಾಗಿ ಸದಾನಂದ ಸಹ ಅವಿರೋಧವಾಗಿ ಆಯ್ಕೆಯಾಗಿದ್ದು, ಯೂನಿಯನ್‌ನ ನಿರ್ದೇಶಕರು ಅಭಿನಂದಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು