ರಾಜೀವ್ ತಾರನಾಥ್ ಅವರಿಗೆ ರಾಷ್ಟ್ರೀಯ ಪುರಸ್ಕಾರ ಪ್ರದಾನ ನಾಳೆ

ಮೈಸೂರು: ಸರೋದ್ ವಾದಕ ಪಂಡಿತ್ ರಾಜೀವ್ ತಾರನಾಥ್ ಅವರಿಗೆ ಶ್ರೀರಾಮಸೇವಾ ಮಂಡಲಿ ಟ್ರಸ್ಟ್ ವತಿಯಿಂದ ನೀಡಲಾಗುವ ಎಸ್.ವಿ.ನಾರಾಯಣಸ್ವಾಮಿರಾವ್ ಸ್ಮಾರಕ ರಾಷ್ಟ್ರೀಯ ಪುರಸ್ಕಾರ–2020ವನ್ನು ಡಿ. 21ರಂದು ಇಲ್ಲಿ ಸಂಜೆ 4 ಗಂಟೆಗೆ ಶಿಕ್ಷಣ ಸಚಿವ ಎಸ್.ಸುರೇಶ್ಕುಮಾರ್ ಪ್ರದಾನ ಮಾಡಲಿದ್ದಾರೆ.
ಸಂಸದ ಕೆ.ಸಿ.ರಾಮಮೂರ್ತಿ, ಸಂಗೀತ ವಿದ್ವಾಂಸ ಡಾ.ಮೈಸೂರು ಎಂ.ಮಂಜುನಾಥ್ ಭಾಗವಹಿಸಲಿದ್ದಾರೆ. ಕಾರ್ಯಕ್ರಮವು ‘# 154, 11ನೇ ಮೇನ್, ಸರಸ್ವತಿಪುರಂ, ಮೈಸೂರು’ ಇಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.