ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾದಿನಿ ಮೇಲೆ ಅತ್ಯಾಚಾರ; ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ

Last Updated 31 ಆಗಸ್ಟ್ 2018, 9:31 IST
ಅಕ್ಷರ ಗಾತ್ರ

ಮೈಸೂರು: ನಾದಿನಿ ಮೇಲೆ ಅತ್ಯಾಚಾರ ಎಸಗಿದ ಆರೋಪಿಯೊಬ್ಬನಿಗೆ ಇಲ್ಲಿನ ಪೋಕ್ಸೊ ವಿಶೇಷ ನ್ಯಾಯಾಲಯವು 10 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ ₹ 55 ಸಾವಿರ ದಂಡ ವಿಧಿಸಿದೆ.

ಪ್ರಕರಣದ ವಿವರ:ಕೆ.ಆರ್.ನಗರ ತಾಲ್ಲೂಕಿನ ಗ್ರಾಮವೊಂದರ 28 ವರ್ಷ ವಯಸ್ಸಿನ ಆರೋಪಿಯು ತನ್ನ ಪತ್ನಿ ಜತೆ ಮೈಸೂರಿನ ಹೂಟಗಳ್ಳಿ ಕೈಗಾರಿಕಾ ಪ್ರದೇಶದಲ್ಲಿ 2015ರಲ್ಲಿ ನೆಲೆಸಿದ್ದ. ಸಮೀಪದಲ್ಲೇ ಇದ್ದ ಪತ್ನಿಯ ತಾಯಿ ಮನೆಗೆ ನಾದಿನಿ ಒಬ್ಬಳೇ ಇದ್ದಾಗ ನುಗ್ಗಿದ ಈತ ಮನೆಯವರನ್ನೆಲ್ಲ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಬಾಲಕಿಯು ಗರ್ಭಿಣಿಯಾದಾಗಲೇ ಮನೆಯವರಿಗೆ ವಿಷಯ ಗೊತ್ತಾಗಿದೆ. ಕೂಡಲೇ ಆರೋಪಿ ವಿರುದ್ಧ ಬಾಲಕಿಯ ತಾಯಿ ಪೊಲೀಸ್ ಠಾಣೆಗೆ ದೂರು ನೀಡಿದರು. ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯದಲ್ಲಿ ದೋಷಾರೋಪ ಪಟ್ಟಿ ಸಲ್ಲಿಸಿದರು.

ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದ್ದಾಗಲೇ ಬಾಲಕಿಗೆ ಮಗು ಜನಿಸುತ್ತದೆ. ಈ ಮಗುವಿನ ಡಿಎನ್‌ಎ ಪರೀಕ್ಷೆಯಲ್ಲಿ ಮಗುವಿನ ಜೈವಿಕ ತಂದೆ ಆರೋಪಿಯೇ ಎಂಬುದು ಸಾಬೀತಾಗುತ್ತದೆ. ಆರೋಪಿಗೆ ನ್ಯಾಯಾಧೀಶರಾದ ಬಿ.ಎಸ್.ಜಯಶ್ರೀ ಅವರು 10 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ ₹ 55 ಸಾವಿರ ದಂಡ ವಿಧಿಸಿದ್ದಾರೆ.

ಸರ್ಕಾರದ ಪರವಾಗಿ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಬಿ.ಸಿ.ಶಿವರುದ್ರಸ್ವಾಮಿ ವಾದ ಮಂಡಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT