ಮಹಿಳೆ ಮೇಲೆ ಅತ್ಯಾಚಾರ, ಕೊಲೆ; ಐವರ ಬಂಧನ
ಮೈಸೂರು: ನಗರದ ಕೆ.ಟಿ.ಸ್ಟ್ರೀಟ್‌ನಲ್ಲಿ ಸೋಮವಾರ ತಡರಾತ್ರಿ ನಡೆದ 50 ವರ್ಷದ ಮಹಿಳೆಯೊಬ್ಬರ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
‘ಭಿಕ್ಷೆ ಬೇಡಿ ಜೀವನ ಸಾಗಿಸುತ್ತ, ರಸ್ತೆ ಬದಿಯಲ್ಲೇ ಮಲಗುತ್ತಿದ್ದ ಮಹಿಳೆಗೆ ಆರೋಪಿಗಳು ಮದ್ಯ ಕುಡಿಸಿ. ನಂತರ, ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಾರೆ. ಈ ವೇಳೆ ಆಘಾತಕ್ಕೆ ಒಳಗಾದ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಹಿಳೆಯ ಗುರುತು ಪತ್ತೆಯಾಗಿಲ್ಲ. ಐವರು ಆರೋಪಿಗಳನ್ನು ಬಂಧಿಸಲಾಗಿದೆ’ ಎಂದು ಡಿಸಿಪಿ ಡಾ.ಎ.ಎನ್.ಪ್ರಕಾಶ್‌ಗೌಡ ತಿಳಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.