ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬುದ್ಧಿಮಾಂದ್ಯ ಯುವತಿಯ ಮೇಲೆ ಅತ್ಯಾಚಾರ; ವ್ಯಕ್ತಿ ಬಂಧನ

Last Updated 21 ಅಕ್ಟೋಬರ್ 2018, 18:33 IST
ಅಕ್ಷರ ಗಾತ್ರ

ಮೈಸೂರು: ನಗರದ 33 ವರ್ಷ ವಯಸ್ಸಿನ ಬುದ್ಧಿಮಾಂದ್ಯ ಯುವತಿಯೊಬ್ಬರ ಮೇಲೆ ಸಲ್ಮಾನ್‌ ಉಲ್ಲಾ ಖಾನ್‌ (35) ಎಂಬಾತ ಭಾನುವಾರ ಬೆಳಿಗ್ಗೆ ಅತ್ಯಾಚಾರ ಎಸಗಿ, ಕೊಲೆ ಮಾಡಲು ಯತ್ನಿಸಿದ್ದಾನೆ. ಈ ವೇಳೆ ಸಾರ್ವಜನಿಕರು ಆತನನ್ನು ಹಿಡಿದು ಹಿಗ್ಗಾಮುಗ್ಗಾ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.

ಸಂತ್ರಸ್ತ ಯುವತಿಯು ತಾಯಿ ಮತ್ತು ತಂಗಿಯ ಜತೆ ವಾಸವಿದ್ದರು. ತಾಯಿ ಮತ್ತು ತಂಗಿ ಹೊರಕ್ಕೆ ಹೋಗಿದ್ದಾಗ ಮನೆ ಪ್ರವೇಶಿಸಿದ ಆರೋಪಿಯು ಯುವತಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ನಂತರ, ಕುತ್ತಿಗೆ ಹಿಸುಕಿ ಕೊಲೆ ಮಾಡಲು ಪ್ರಯತ್ನಿಸಿದ್ದಾನೆ. ಈ ವೇಳೆ ಮನೆಗೆ ಬಂದ ಯುವತಿಯ ತಂಗಿ ನೆರೆಹೊರೆಯವರನ್ನು ಸಹಾಯಕ್ಕೆ ಕರೆದಿದ್ದಾರೆ. ಸಾರ್ವಜನಿಕರು ಆರೋಪಿಯನ್ನು ಹಿಡಿದು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT