ಶುಕ್ರವಾರ, ಜುಲೈ 30, 2021
21 °C
ಕೆ.ಆರ್.ಆಸ್ಪತ್ರೆಯ ನಿರಾಶ್ರಿತರ ವಾರ್ಡ್‌ನಲ್ಲಿದ್ದ ಮಹಿಳೆ

ಮೈಸೂರು: ಬುದ್ಧಿಮಾಂದ್ಯ ಮಹಿಳೆ ಮೇಲೆ ಅತ್ಯಾಚಾರ?

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮೈಸೂರು: ಇಲ್ಲಿನ ಕೆ.ಆರ್.ಆಸ್ಪತ್ರೆಯಲ್ಲಿ ದುಷ್ಕರ್ಮಿಗಳು ಕಿಟಕಿ ಮುರಿದು ಒಳನುಗ್ಗಿ ಬುದ್ಧಿಮಾಂದ್ಯ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ನಡೆಸಿರುವ ಕುರಿತು ಇಲ್ಲಿನ ದೇವರಾಜ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ‌.

ಅಸ್ವಸ್ಥಗೊಂಡ ನಿರಾಶ್ರಿತರ ವಾರ್ಡ್‌ನಲ್ಲಿ ಇದ್ದ 35 ವರ್ಷ ವಯಸ್ಸಿನ ಮಹಿಳೆಯೊಬ್ಬರ ಮೇಲೆ ಕಳೆದ ಶನಿವಾರ (ಜುಲೈ 3) ರಾತ್ರಿ ಅತ್ಯಾಚಾರ ನಡೆದಿದೆ ಎಂದು ಆರೋಪಿಸಿ ಮಾನವ ಹಕ್ಕುಗಳ ಸೇವಾ ಸಮಿತಿ ಸದಸ್ಯರು ದೂರು ನೀಡಿದ್ದಾರೆ‌. ದೂರು ದಾಖಲಿಸಿಕೊಂಡ ಪೊಲೀಸರು ಮಹಿಳೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ.

‘ಮೇಲ್ನೋಟಕ್ಕೆ ಕಿಟಕಿ ಮುರಿದಿರುವುದು ಕಂಡು ಬಂದಿದೆ‌. ಆದರೆ, ಅತ್ಯಾಚಾರ ನಡೆದಿರುವ ಕುರಿತು ಮಹಿಳೆಯಾಗಲಿ, ವಾರ್ಡ್‌ನಲ್ಲಿರುವ ಇತರೆ ರೋಗಿಗಳಾಗಲಿ ಹೇಳಿಕೆ ನೀಡುತ್ತಿಲ್ಲ. ಭದ್ರತಾ ಸಿಬ್ಬಂದಿಯನ್ನು ವಿಚಾರಣೆ ನಡೆಸಲಾಗುತ್ತಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು