ಸೋಮವಾರ, ಜನವರಿ 18, 2021
27 °C
ಮುಡುಕುತೊರೆ ಮಲ್ಲಿಕಾರ್ಜುನಸ್ವಾಮಿ ದೇವಸ್ಥಾನಕ್ಕೆ ಹೊಸರೂಪ

₹ 30 ಕೋಟಿ ವೆಚ್ಚದಲ್ಲಿ ಪುನರ್‌ನಿರ್ಮಾಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಇತಿಹಾಸ ಪ್ರಸಿದ್ಧ ತಲಕಾಡಿನ ಪಂಚಲಿಂಗಗಳಲ್ಲಿ ಒಂದಾಗಿರುವ ಮುಡುಕುತೊರೆ ಶ್ರೀ ಭ್ರಮರಾಂಬ ಸಮೇತ ಮಲ್ಲಿಕಾರ್ಜುನಸ್ವಾಮಿ ದೇವ ಸ್ಥಾನವನ್ನು ₹ 30 ಕೋಟಿ ವೆಚ್ಚದಲ್ಲಿ ಪುನರ್‌ನಿರ್ಮಾಣ ಮಾಡಲು ಸರ್ಕಾರ ಮುಂದಾಗಿದೆ.

ದೇವಸ್ಥಾನವು ಶಿಥಿಲಗೊಂಡಿ ರುವುದರಿಂದ ಪುನರ್ ನಿರ್ಮಾ ಣಕ್ಕೆ ನಿರ್ಧರಿಸಲಾಗಿದ್ದು, ಈ ಕೆಲಸಕ್ಕೆ ಭ್ರಮರಾಂಬ ಸಮೇತ ಮಲ್ಲಿಕಾ ರ್ಜುನಸ್ವಾಮಿ ದೇವಾಲಯ ಅಭಿವೃದ್ಧಿ ಸಮಿತಿ ರಚಿಸಲಾಗಿದೆ. ಮೂಲ ದೇವರ ವಿಗ್ರಹಗಳನ್ನು ಹಾಗೇ ಉಳಿಸಿಕೊಂಡು ದೇವಸ್ಥಾನವನ್ನು ಸಂಪೂರ್ಣವಾಗಿ ತೆರವುಗೊಳಿಸಿ ಹೊಸದಾಗಿ ನಿರ್ಮಾಣ ಮಾಡಲಾಗುತ್ತಿದೆ ಎಂದು ದೇವಾಲಯ ಅಭಿವೃದ್ಧಿ ಸಮಿತಿಯ ಪ್ರಧಾನ ಕಾರ್ಯ ದರ್ಶಿ ಡಾ.ನಂದೀಶ್ ಹಂಚೆ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಮೊದಲ ಹಂತದಲ್ಲಿ ಭ್ರಮರಾಂಬ ದೇವಸ್ಥಾನವನ್ನು ಪೂರ್ಣ ಪ್ರಮಾಣದಲ್ಲಿ ಕೃಷ್ಣ ಶಿಲೆಯಲ್ಲಿ, ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನವನ್ನು ಬಿಳಿಕಲ್ಲುಗಳಲ್ಲಿ ನಿರ್ಮಾಣ ಮಾಡಲಾಗುತ್ತದೆ. 2ನೇ ಹಂತದಲ್ಲಿ ಚಂದ್ರಶಾಲೆ ನಿರ್ಮಾಣ ಹಾಗೂ ಮೂರನೇ ಹಂತದಲ್ಲಿ ರಾಜ ಗೋಪುರ ನಿರ್ಮಾಣ ಕಾರ್ಯ ನಡೆ ಯಲಿದೆ ಎಂದು ಮಾಹಿತಿ ನೀಡಿದರು.

ಎರಡು ದೇವಸ್ಥಾನಗಳ ಪುನರ್ ನಿರ್ಮಾಣಕ್ಕೆ ₹ 16 ಕೋಟಿ ವೆಚ್ಚವಾ ಗಲಿದೆ. ₹ 10 ಕೋಟಿ ವೆಚ್ಚದಲ್ಲಿ ಬೆಟ್ಟಕ್ಕೆ ಸುರಕ್ಷಿತ ಗೋಡೆ, ರಥ ಬೀದಿ ನಿರ್ಮಾಣ ಮಾಡಲಾಗುವುದು ಎಂದರು.

ದೇವಸ್ಥಾನ ಪುನರ್‌ ನಿರ್ಮಾ ಣಕ್ಕೆ ಸರ್ಕಾರ ₹ 5 ಕೋಟಿ ಬಿಡುಗಡೆ ಗೊಳಿಸಿದೆ. ಇನ್ನುಳಿದ ₹ 11 ಕೋಟಿ ಮೊತ್ತವನ್ನು ದೇವಾಲಯ ಅಭಿವೃದ್ಧಿ ಸಮಿತಿಯು ಭಕ್ತರಿಂದ ಸಂಗ್ರಹಿಸಲು ಸರ್ಕಾರ ಅನುಮತಿ ನೀಡಿದೆ. ಸಮಿತಿಯು ಪಾರದರ್ಶಕವಾಗಿ ಕೆಲಸ ಮಾಡಲು ನೇತೃತ್ವವನ್ನು ಜಿಲ್ಲಾಧಿಕಾರಿಗೆ ವಹಿಸಲಾಗಿದೆ ಎಂದರು.

ಸಿಎಂ ಶಂಕುಸ್ಥಾಪನೆ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನ.25 ರಂದು ದೇವಸ್ಥಾನದ ಪುನರ್‌ನಿರ್ಮಾಣ ಕಾರ್ಯಕ್ಕೆ ಶಂಕು ಸ್ಥಾಪನೆ ನೆರವೇರಿಸಲಿ ದ್ಧಾರೆ ಎಂದು ಸಮಿತಿಯ ಅಧ್ಯಕ್ಷ ಪ್ರೊ.ಎಸ್.ಪಿ.ಮಂಜುನಾಥ್ ತಿಳಿಸಿದರು.

ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಭಾಗವಹಿಸಲಿದ್ದಾರೆ. ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದು, ಶಾಸಕ ಎಂ.ಅಶ್ವಿನ್ ಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು