ಶನಿವಾರ, ಜೂನ್ 19, 2021
24 °C

ಕಾಳಸಂತೆಯಲ್ಲಿ ರೆಮ್‌ಡಿಸಿವಿರ್‌ ಮಾರಾಟ: ಮೈಸೂರಿನಲ್ಲಿ ಶುಶ್ರೂಷಕರಿಬ್ಬರ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಕಾಳಸಂತೆಯಲ್ಲಿ ರೆಮ್‌ಡಿಸಿವಿರ್‌ ಚುಚ್ಚುಮದ್ದು ಮಾರಾಟ ಮಾಡುತ್ತಿದ್ದ ಶುಶ್ರೂಷಕರಿಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಮೈಸೂರಿನ ಕೆಆರ್‌ಎಸ್‌ ರಸ್ತೆಯಲ್ಲಿರುವ ಚಂದ್ರೋದಯ ಐ ಜನರಲ್ ಆಸ್ಪತ್ರೆ (ಸಿ.ಇ.ಜಿ.)ಯ ಶುಶ್ರೂಷಕರಾದ ಡೇವಿಡ್‌ ಇನೋಸ್‌ (24), ಅಜಯ್‌ (22) ಬಂಧಿತರು.

ರೋಗಿಗಳಿಗೆ ನೀಡಬೇಕಿದ್ದ ಚುಚ್ಚುಮದ್ದನ್ನು ಆರೋಪಿಗಳಿಬ್ಬರು ಬುಧವಾರ ರಾತ್ರಿ ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದಾಗ, ಸಿಸಿಬಿ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ.

ಬಂಧಿತರಿಂದ ಎರಡು ಚುಚ್ಚುಮದ್ದು ವಶಪಡಿಸಿಕೊಳ್ಳಲಾಗಿದೆ ಎಂದು ಮೈಸೂರು ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ತಿಳಿಸಿದ್ದಾರೆ.

ಬುಧವಾರ ಸಹ ಐವರು ಶುಶ್ರೂಷಕರನ್ನು ರೆಮ್‌ಡಿಸಿವಿರ್‌ ಚುಚ್ಚುಮದ್ದನ್ನು ಕಾಳಸಂತೆಯಲ್ಲಿ ಮಾರಾಟ ಮಾಡುವಾಗ ಬಂಧಿಸಲಾಗಿತ್ತು.

ಸಿಂಡಿಕೇಟ್‌ ಸದಸ್ಯ ಬಂಧನ
ಬಳ್ಳಾರಿ:
ಕಾಳಸಂತೆಯಲ್ಲಿ ರೆಮ್‌ಡಿಸಿವಿರ್‌ ಲಸಿಕೆ ಮಾರಾಟ ಆರೋಪದಡಿ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಸಿಂಡಿಕೇಟ್‌ ಸದಸ್ಯ ಮಲ್ಲಿಕಾರ್ಜುನ ಗೌಡ ಸೇರಿ ಮೂವರನ್ನು ಕೌಲ್‌ಬಜಾರ್‌ ಠಾಣೆ ಪೊಲೀಸರು ಗುರುವಾರ ಬಂಧಿಸಿದ್ದಾರೆ. ಮಂಜುನಾಥ ಮೆಡಿಕಲ್‌ ಏಜೆನ್ಸಿ ಮಾಲೀಕ ವೆಂಕಟೇಶ ಬಾಬು, ವರ್ತಕ ಪೋಲಾ ಪ್ರವೀಣ್‌ ಬಂಧಿತ ಇನ್ನಿಬ್ಬರು.

‘ಈಗ ಮೂವರ ಬಂಧನದ ಬಳಿಕ ತನಿಖೆ ಇನ್ನಷ್ಟು ಚುರುಕುಗೊಳಿಸಿದ್ದು, ಇನ್ನಷ್ಟು ಆರೋಪಿಗಳನ್ನೂ ಶೀಘ್ರ ಬಂಧಿಸಲಾಗುವುದು’ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸೈದುಲು ಅಡಾವತ್‌ ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು