ಶುಕ್ರವಾರ, ಡಿಸೆಂಬರ್ 4, 2020
22 °C

ಫ್ಯಾಂಟಸಿ ಪಾರ್ಕ್‌ಗೆ ಅನುಮತಿ ನೀಡಲು ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮೈಸೂರು: ಫ್ಯಾಂಟಸಿ ಪಾರ್ಕ್‌ಗಳನ್ನು ತೆರೆಯಲು ಅನುಮತಿ ನೀಡಬೇಕು ಎಂದು ಆಗ್ರಹಿಸಿ ಜಿಆರ್‌ಎಸ್‌ ಫ್ಯಾಂಟಸಿ ಪಾರ್ಕ್ ಎಂಪ್ಲಾಯೀಸ್‌ ಯೂನಿಯನ್‌ ನೇತೃತ್ವದಲ್ಲಿ ಕಾರ್ಯಕರ್ತರು ಬುಧವಾರ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.

‘ಕಳೆದ 21 ವರ್ಷಗಳಿಂದ ಇದೇ ಪಾರ್ಕ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದೇವೆ. ಆದರೆ, ಕೋವಿಡ್‌ ಬಂದ ನಂತರ ಕೆಲಸವೇ ಇಲ್ಲದಂತಾಗಿ ಜೀವನ ನಿರ್ವಹಣೆಗೆ ಪರದಾಡುತ್ತಿದ್ದೇವೆ. ಈಗ ಸರ್ಕಾರ ಪಾರ್ಕ್ ಕಾರ್ಯಾರಂಭ ಮಾಡಲು ಅನುಮತಿ ನೀಡಿದರೆ ಒಂದೆರಡು ಹೊತ್ತು ಊಟ ಸಿಗುತ್ತದೆ’ ಎಂದು ಅವರು ಮನವಿ ಮಾಡಿದರು.

ಲಾಕ್‌ಡೌನ್‌ ಸಮಯದಲ್ಲಿ ಕಡಿತವಾಗಿರುವ ವೇತನ ನೀಡಬೇಕು, ತುಟ್ಟಿಭತ್ಯೆ ಸೌಲಭ್ಯ ಕಲ್ಪಿಸಬೇಕು, ಗುತ್ತಿಗೆ ಕಾರ್ಮಿಕರನ್ನು ಮರಳಿ ಕೆಲಸಕ್ಕೆ ತೆಗೆದುಕೊಳ್ಳಬೇಕು ಎಂದು ಅವರು ಆಗ್ರಹಿಸಿದರು.

ಸಂಘಟನೆಯ ಅಧ್ಯಕ್ಷ ಜಿ.ಜಯರಾಂ, ಉಪಾಧ್ಯಕ್ಷ ಎಂ.ಕುಮಾರ್, ಪ್ರಧಾನ ಕಾರ್ಯದರ್ಶಿ ಎಚ್.ಎಸ್.ಜಗದೀಶ್, ಜಂಟಿ ಕಾರ್ಯದರ್ಶಿ ಯು.ಎಸ್.ಶ್ರೀನಿವಾಸ್, ಸಂಘಟನಾ ಕಾರ್ಯದರ್ಶಿ ಕೆ.ಎಂ.ರಮೇಶ್ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.