ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉನ್ನತ ಶಿಕ್ಷಣಕ್ಕೆ ಅನುದಾನ ಹೆಚ್ಚಿಸಲು ಕೋರಿಕೆ: ಸಚಿವ

Last Updated 17 ಫೆಬ್ರುವರಿ 2021, 21:47 IST
ಅಕ್ಷರ ಗಾತ್ರ

ಕೆ.ಆರ್‌.ನಗರ (ಮೈಸೂರು): ಬಜೆಟ್‌ನಲ್ಲಿ ಉನ್ನತ ಶಿಕ್ಷಣಕ್ಕೆ ಶೇ 2ರಷ್ಟು ಅನುದಾನವಿದ್ದು, ಅದನ್ನು ಶೇ 3.5ಕ್ಕೆ ಹೆಚ್ಚಿಸುವಂತೆ ಕೋರಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಬುಧವಾರ ಇಲ್ಲಿ ತಿಳಿಸಿದರು.

‘ಕಾಲೇಜುಗಳಲ್ಲಿ ಅತಿಥಿಉಪನ್ಯಾಸಕರು ಎಂಬಪರಿಕಲ್ಪನೆಯೇ ಇರಬಾರದು. ಎಲ್ಲರೂ ಕಾಯಂ ಉದ್ಯೋಗಿಗಳಾಗಿರಬೇಕು. ಈ ಮೂಲಕ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗಬೇಕು. ಹೊಸದಾಗಿ ಎಂಟು ಸಾವಿರ ಹುದ್ದೆ ಸೃಷ್ಟಿಸಲುಕೋರಲಾಗುವುದು’ ಎಂದರು.

‘ಹಂತ ಹಂತವಾಗಿ ಆಡಳಿತದಲ್ಲಿ ಸುಧಾರಣೆ ತರಲು ಯೋಜನೆ ರೂಪಿಸಿದ್ದೇವೆ. ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಆರ್ಥಿಕ, ಶೈಕ್ಷಣಿಕ ಸ್ವಾಯತ್ತೆ ಸಿಗಬೇಕು. ಈ ಮೂಲಕ ಶಿಕ್ಷಣ ಸಂಸ್ಥೆಗಳೇ ಎಲ್ಲವನ್ನೂ ನಿರ್ವಹಣೆ ಮಾಡಬೇಕು’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT