ಬುಧವಾರ, ಜನವರಿ 29, 2020
29 °C

ಪಿಂಚಣಿ ಸೌಲಭ್ಯಕ್ಕೆ ಆಗ್ರಹಿಸಿ 10 ರಿಂದ ಧರಣಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮೈಸೂರು: ಅನುದಾನಿತ ಶಾಲಾ, ಕಾಲೇಜುಗಳ ನೌಕರರಿಗೂ ಪಿಂಚಣಿ ಸೌಲಭ್ಯ ನೀಡುವಂತೆ ಒತ್ತಾಯಿಸಿ ಪಿಂಚಣಿ ವಂಚಿತ ರಾಜ್ಯದ ನೌಕರರು ಜ. 10 ರಿಂದ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಅಹೋರಾತ್ರಿ ಧರಣಿ ನಡೆಸಲು ನಿರ್ಧರಿಸಿದ್ದಾರೆ.

‍ಪಿಂಚಣಿ ವಿಚಾರದಲ್ಲಿ ಸರ್ಕಾರಿ ಶಾಲೆ ಮತ್ತು ಅನುದಾನಿತ ಶಾಲೆಗಳ ನಡುವೆ ತಾರತಮ್ಯ ಎಸಗಲಾಗಿದೆ. ಅನುದಾನಿತ ಶಾಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ನೌಕರರಿಗೆ 2006ರಿಂದ ಯಾವುದೇ ಪಿಂಚಣಿ ಸೌಲಭ್ಯ ಲಭಿಸಿಲ್ಲ. ನಿವೃತ್ತಿಯ ಬಳಿಕ ನೌಕರರ ಕುಟುಂಬ ಬೀದಿಗೆ ಬೀಳುವ ಪರಿಸ್ಥಿತಿಯಿದೆ ಎಂದು ರಾಜ್ಯ ಪಿಂಚಣಿ ವಂಚಿತ ನೌಕರರ ಸಂಘದ ಜಂಟಿ ಕಾರ್ಯದರ್ಶಿ ಬಾಲು ಎಸ್‌.ರಂಗಸ್ವಾಮಿ ತಿಳಿಸಿದರು.

‘ಸಮಾನ ಪಿಂಚಣಿಗೆ ಆಗ್ರಹಿಸಿ ಕೆಲ ವರ್ಷಗಳಿಂದ ಹೋರಾಟ ಮಾಡುತ್ತಿದ್ದರೂ ಸರ್ಕಾರ ಸ್ಪಂದಿಸಿಲ್ಲ. ಅಕ್ಟೋಬರ್‌ನಲ್ಲಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದಾಗ, ಆಗ ವಿರೋಧ ಪಕ್ಷದ ನಾಯಕರಾಗಿದ್ದ ಬಿ.ಎಸ್‌.ಯಡಿಯೂರಪ್ಪ ಬೆಂಬಲ ಸೂಚಿಸಿದ್ದರು. ಪಿಂಚಣಿ ಪ್ರತಿಯೊಬ್ಬ ನೌಕರನ ಮೂಲಭೂತ ಹಕ್ಕು ಎಂದಿದ್ದರು. ಇದೀಗ ಅವರು ರಾಜ್ಯದ ಮುಖ್ಯಮಂತ್ರಿ ಆಗಿದ್ದಾರೆ. ನಮ್ಮ ಬೇಡಿಕೆ ಈಡೇರಿಸಬೇಕು’ ಎಂದು ಒತ್ತಾಯಿಸಿದರು.

ರಾಜ್ಯದಾದ್ಯಂತ ಅನುದಾನಿತ ಶಾಲೆಗಳ 70 ಸಾವಿರ ನೌಕರರು ಪಿಂಚಣಿ ವಂಚಿತರಾಗಿದ್ದಾರೆ. ಧರಣಿಯಲ್ಲಿ 30 ಸಾವಿರಕ್ಕೂ ಅಧಿಕ ಮಂದಿ ಪಾಲ್ಗೊಳ್ಳಲಿದ್ದಾರೆ ಎಂದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು