ಮೈಸೂರು: ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಹೆಚ್ಚುತ್ತಿರುವುದರಿಂದ ನಾಡಹಬ್ಬ ದಸರಾವನ್ನು ಸರಳವಾಗಿ ಆಚರಿಸಲಾಗುತ್ತಿದ್ದು, ಮೈಸೂರು ಹಾಗೂ ಸುತ್ತಮುತ್ತಲಿನ ಪ್ರವಾಸಿ ತಾಣಗಳಿಗೆ ಪ್ರವಾಸಿಗರು ಬರದಂತೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮನವಿ ಮಾಡಿದ್ದಾರೆ.

ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್, ಜಿಲ್ಲಾ ಪಂಚಾಯಿತಿ ಸಿಇಒ ಡಿ.ಭಾರತಿ, ಮಹಾನಗರ ಪಾಲಿಕೆ ಆಯುಕ್ತ ಗುರುದತ್ ಹೆಗಡೆ, ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎಸ್.ಮಂಜುನಾಥಸ್ವಾಮಿ, ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕ ಅಜಿತ್ ಕುಲಕರ್ಣಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಬುಧವಾರ ಸಭೆ ನಡೆಸಿದ ಜಿಲ್ಲಾಧಿಕಾರಿ ಈ ತೀರ್ಮಾನಕ್ಕೆ ಬಂದಿದ್ದಾರೆ.

ಮೈಸೂರು ಜಿಲ್ಲೆಯಲ್ಲಿ ಈಗಾಗಲೇ ಕೋವಿಡ್ ಉಲ್ಬಣಿಸಿದೆ. ಅಂದಾಜು 900 ಮಂದಿ ಮೃತಪಟ್ಟಿದ್ದಾರೆ. 6800ಕ್ಕೂ ಹೆಚ್ಚು ಸಕ್ರಿಯ ಕೋವಿಡ್ ಪ್ರಕರಣಗಳಿವೆ. ಈ ಪರಿಸ್ಥಿತಿಯಲ್ಲಿ ಪ್ರವಾಸಿಗರು ಮೈಸೂರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಬರುವುದು ಸೂಕ್ತವಲ್ಲ ಎಂದು ಅವರು ತಿಳಿಸಿದ್ದಾರೆ.

ಹಿಂದಿನ ವರ್ಷದ ದಸರಾ ಸಮಯದಲ್ಲಿ ಲಕ್ಷಾಂತರ ಜನರು ಮೈಸೂರಿಗೆ ಭೇಟಿ ನೀಡಿದ್ದರು. ಈ ವರ್ಷ ಸೋಂಕು ಹರಡುತ್ತಿರುವುದರಿಂದ ಅಪಾರ ಸಂಖ್ಯೆಯ ಜನರು ಮೈಸೂರಿಗೆ ಬಂದರೆ, ಹೆಚ್ಚಿನ ಜನರಿಗೆ ಸೋಂಕು ಹರಡಬಹುದು ಎಂಬ ಉದ್ದೇಶದಿಂದ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ರೋಹಿಣಿ ಸಿಂಧೂರಿ ಸಭೆಗೆ ತಿಳಿಸಿದರು.

ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳಾದ ಚಾಮುಂಡಿಬೆಟ್ಟ ಪ್ರವೇಶವನ್ನು ಅ.14ರಿಂದ ಹಾಗೂ ಮೈಸೂರು ಅರಮನೆ, ಮೃಗಾಲಯ, ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯದ ಪ್ರವೇಶವನ್ನು ಅ.17ರಿಂದ ನ.1ರವರೆಗೆ ನಿರ್ಬಂಧಿಸಿಲಾಗಿದೆ.

ಮೈಸೂರಿಗೆ ಸಮೀಪದ ಪ್ರವಾಸಿ ತಾಣವಾದ ಕೃಷ್ಣರಾಜ ಸಾಗರ, ರಂಗನತಿಟ್ಟು ಪಕ್ಷಿಧಾಮ, ಶ್ರೀರಂಗಪಟ್ಟಣ, ನಿಮಿಷಾಂಭ ದೇಗುಲಕ್ಕೂ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲು ಮಂಡ್ಯ ಜಿಲ್ಲಾಡಳಿತಕ್ಕೆ ಮನವಿ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.