ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರು: ಇಂದಿನಿಂದ ಚಾಮುಂಡಿಬೆಟ್ಟಕ್ಕೆ ಪ್ರವೇಶ ನಿಷಿದ್ಧ

Last Updated 5 ಅಕ್ಟೋಬರ್ 2021, 6:16 IST
ಅಕ್ಷರ ಗಾತ್ರ

ಮೈಸೂರು: ದಸರಾ ಉದ್ಘಾಟನೆ ಸಮಾರಂಭವು ಅ.7ರಂದು ನಡೆಯಲಿದ್ದು ಭದ್ರತೆಯ ಸಲುವಾಗಿ ಅ. 5ರ ನಸುಕಿನ 4 ಗಂಟೆಯಿಂದ ಅ. 7ರ ಮಧ್ಯಾಹ್ನದವರೆಗೂ ಚಾಮುಂಡಿಬೆಟ್ಟಕ್ಕೆ ಸಾರ್ವಜನಿಕರು ಹಾಗೂ ಭಕ್ತರ ಪ್ರವೇಶವನ್ನು ನಿರ್ಬಂಧಿಸಿ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಆದೇಶ ಹೊರಡಿಸಿದ್ದಾರೆ.

ಆ ಅವಧಿಯಲ್ಲಿ ಭಕ್ತರು ಮೆಟ್ಟಿಲುಗಳನ್ನು ಹತ್ತುವುದು, ಬೆಟ್ಟದ ದೇಗುಲಗಳಲ್ಲಿ ದಾಸೋಹ, ಊಟದ ವ್ಯವಸ್ಥೆ, ಪ್ರಸಾದ ವಿತರಣೆಯನ್ನೂ ನಿಷೇಧಿಸಲಾಗಿದೆ. ಚಾಮುಂಡೇಶ್ವರಿ ದೇಗುಲದಲ್ಲಿ ಧಾರ್ಮಿಕ ಕಾರ್ಯಕ್ರಮಗಳನ್ನು ಅಧಿಕಾರಿಗಳು, ಅರ್ಚಕರು ಹಾಗೂ ದೇಗುಲದ ಸಿಬ್ಬಂದಿಯು ದೇವಾಲಯದ ಆವರಣದಲ್ಲಿ ಮಾತ್ರವೇ ನಡೆಸಬೇಕು ಎಂದು ಸೂಚಿಸಿದ್ದಾರೆ.

ಕೇಂದ್ರ ಮತ್ತು ರಾಜ್ಯ ಸರ್ಕಾರದ ಶಿಷ್ಟಾಚಾರದ ವ್ಯವಸ್ಥೆ ಹೊಂದಿರುವವರು, ಕೆಲಸದ ನಿಮಿತ್ತ ತೆರಳುವ ಸರ್ಕಾರಿ ಅಧಿಕಾರಿಗಳು, ತುರ್ತು ಸೇವಾ ವಾಹನಗಳು ಹಾಗೂ ಚಾಮುಂಡಿಬೆಟ್ಟದ ಗ್ರಾಮಸ್ಥರ ವಾಹನಗಳನ್ನು ಹೊರತುಪಡಿಸಿ ಉಳಿದ ಯಾವುದೇ ವಾಹನಗಳ ಸಂಚಾರಕ್ಕೆ ಅನುಮತಿ ನೀಡಿಲ್ಲ. ಬೆಟ್ಟದ ಗ್ರಾಮಸ್ಥರೂ ಗುರುತಿನ ಚೀಟಿ ತೋರಿಸಿ ಸಂಚರಿಸಬೇಕು ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT