ಶುಕ್ರವಾರ, ಸೆಪ್ಟೆಂಬರ್ 17, 2021
29 °C

ರಸ್ತೆ ಅಪಘಾತ: ಮಿದುಳು ನಿಷ್ಕ್ರಿಯ–ಅಂಗಾಂಗ ದಾನಕ್ಕೆ ಕುಟುಂಬದವರ ನಿರ್ಧಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು/ಮಂಡ್ಯ: ರಸ್ತೆ ಅಪಘಾತದಲ್ಲಿ ಗಾಯಗೊಂಡು ಮಿದುಳು ನಿಷ್ಕ್ರಿಯಗೊಂಡಿರುವ ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಅಜ್ಜಹಳ್ಳಿ ಗ್ರಾಮದ ರೈತ ಪಿ.ರಾಮಕೃಷ್ಣ (50) ಎಂಬುವವರ ಅಂಗಾಂಗ ದಾನ ಮಾಡಲು ಕುಟುಂಬದವರು ಮುಂದಾಗಿದ್ದಾರೆ.

‘ನಮ್ಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯ ದೇಹವನ್ನು ಮಂಗಳವಾರ ಆಂಬುಲೆನ್ಸ್‌ನಲ್ಲಿ ‘ಗ್ರೀನ್‌ ಕಾರಿಡಾರ್‌’ (ಜೀರೊ ಟ್ರಾಫಿಕ್‌) ವ್ಯವಸ್ಥೆ ಮೂಲಕ ಬೆಂಗಳೂರಿನ ಬಿಜಿಎಸ್‌ ಗ್ಲೋಬಲ್‌ ಆಸ್ಪತ್ರೆಗೆ ಸಾಗಿಸಲಾಗಿದೆ. ಬಿಜಿಎಸ್‌ ಆಸ್ಪತ್ರೆಯಲ್ಲಿ ವೈದ್ಯರು ಹೆಚ್ಚಿನ ಪರಿಶೀಲನೆ ನಡೆಸಿ ಅಂಗಾಂಗ ಬೇರ್ಪಡಿಸುವ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳುತ್ತಾರೆ. ಅಂಗಾಂಗ ದಾನಕ್ಕೆ ಕುಟುಂಬ ಸದಸ್ಯರು ಒಪ್ಪಿಗೆ ಸೂಚಿಸಿದ್ದಾರೆ’ ಎಂದು ಸುಯೋಗ್‌ ಆಸ್ಪತ್ರೆಯ ಹಿರಿಯ ವ್ಯವಸ್ಥಾಪಕ (ಕಾರ್ಯಾಚರಣೆ) ಅರುಣ್‌ ಕುಮಾರ್‌ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು