ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರಿನಲ್ಲಿ ರಸ್ತೆ ತಡೆ; ಪ್ರತಿಭಟನೆ

Last Updated 27 ಸೆಪ್ಟೆಂಬರ್ 2021, 4:32 IST
ಅಕ್ಷರ ಗಾತ್ರ

ಮೈಸೂರು: ರೈತ ಸಂಘಟನೆಗಳ ಕಾರ್ಯಕರ್ತರು ಇಲ್ಲಿನ ಮೈಸೂರು ನಂಜನಗೂಡು ರಾಷ್ಟ್ರೀಯ ಹೆದ್ದಾರಿ ತಡೆದು ಸೋಮವಾರ ಕೆಲಕಾಲ ಪ್ರತಿಭಟನೆ ನಡೆಸಿದರು ‌

ಗಣಪತಿ ಸಚ್ಚಿದಾನಂದ ಆಶ್ರಮದ ಮುಂಭಾಗ ಸಂಯುಕ್ತ ಕಿಸಾನ್ ಮೋರ್ಚಾ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ಕಾರ್ಯಕರ್ತರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.ಇದರಿಂದ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತು.

ಬಸ್ ನಿಲ್ದಾಣದ ಮುಂಭಾಗ ಪ್ರತಿಭಟನೆ
ಇಲ್ಲಿನ ಕೆ ಎಸ್ ಆರ್ ಟಿ ಸಿ ಗ್ರಾಮಾಂತರ ಬಸ್ ನಿಲ್ದಾಣದ ಮುಂಭಾಗ ಸೇರಿದ ವಿವಿಧ ಸಂಘಟನೆಗಳ ಕಾರ್ಯಕರ್ತರು ಬಸ್ ತಡೆದು ಪ್ರತಿಭಟನೆ ನಡೆಸಿದ್ದಾರೆ. ಪುರಭವನದ ಮುಂಭಾಗದಿಂದ ಮೆರವಣಿಗೆಯಲ್ಲಿ ಬಂದ ಎಸ್ ಡಿ ಪಿ ಐ, ಪಿ ಎಫ್ ಐ, ಸಿಪಿಐ,ಸಿಪಿಐಎಂ, ಎಐಡಿಎಸ್ಓ, ಎಐಟಿಸಿ ಸೇರಿದಂತೆ ಹತ್ತಾರು ಸಂಘಟನೆಗಳ ಕಾರ್ಯಕರ್ತರು ಸರ್ಕಾರದ ವಿರುದ್ದ ಘೋಷಣೆಗಳನ್ನು ಕೂಗಿದರು.

ಹೋರಾಟಗಾರರಾದ ಪ.ಮಲ್ಲೇಶ್, ಚೋರನಹಳ್ಳಿ ಶಿವಣ್ಣ ಸೇರಿದಂತೆ ಹಲವು ಮುಖಂಡರು ಇದ್ದಾರೆ. ಸ್ಥಳದಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ.

ಪಾಲಿಕೆ ಮುಂಭಾಗಪ್ರತಿಭಟನೆ

ಇಲ್ಲಿ‌ನ ಪಾಲಿಕೆ ಮುಂಭಾಗ ಸಯ್ಯಾಜಿರಾವ್ ರಸ್ತೆ ತಡೆದು ಪ್ರತಿಭಟನಕಾರರು ಪ್ರತಿಭಟನೆ ಆರಂಭಿಸಿದ್ದಾರೆ.
ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಹೊಸಕೋಟೆ ಬಸವರಾಜು ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಹಲವು ಮಂದಿ ಮುಖಂಡರು ಭಾಗವಹಿಸಿದ್ದಾರೆ. ರಸ್ತೆಯಲ್ಲಿ ಕುಳಿತು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಿದ್ದಾರೆ.

ರಸ್ತೆಯಲ್ಲಿ ಮಲಗಿ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು
ಇಲ್ಲಿ‌ನ ಗ್ರಾಮಾಂತರ ಬಸ್ ನಿಲ್ದಾಣದ ಮುಂದಿನ ರಸ್ತೆಯಲ್ಲಿ ಪ್ರತಿಭಟನಕಾರರು ಮಲಗಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಪ್ರತಿಭಟನೆಯಿಂದ ಸುಮಾರು ಒಂದು ಗಂಟೆಯಿಂದ ಮೈಸೂರು ನೀಲಗಿರಿ ರಸ್ತೆಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ. ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅಂಗಡಿ ಮುಂಗಟ್ಟುಗಳು ತೆರೆದಿಲ್ಲ. ಉಳಿದಂತೆ ನಗರದೆಲ್ಲೆಡೆ ಸಹಜ ಸ್ಥಿತಿ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT