ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಸ್ತೆಬದಿ ಕಸ ವಿಲೇವಾರಿ: ಕಟ್ಟೆಮಳಲವಾಡಿ ಗ್ರಾಮಸ್ಥರ ಆಕ್ರೋಶ

Last Updated 4 ಸೆಪ್ಟೆಂಬರ್ 2021, 3:41 IST
ಅಕ್ಷರ ಗಾತ್ರ

ಹುಣಸೂರು: ತಾಲ್ಲೂಕಿನ ಕಟ್ಟೆಮಳಲವಾಡಿ ಗ್ರಾಮದಲ್ಲಿ ಸಂಗ್ರಹವಾಗುವ ಕಸವನ್ನು ರಾಜ್ಯ ಹೆದ್ದಾರಿ 86ಕ್ಕೆ ಹೊಂದಿಕೊಂಡಿರುವ ನಂದಿ ವೃತ್ತದಲ್ಲೇ ಸುರಿಯಲಾಗುತ್ತಿದೆ. ಇದರಿಂದ ದುರ್ವಾಸನೆ ಬೀರುತ್ತಿದ್ದು, ಜನರು ಮೂಗು ಮುಚ್ಚಿಕೊಂಡು ಓಡಾಡುವ ಸ್ಥಿತಿ ಇದೆ.

‘ಗ್ರಾಮದಲ್ಲಿ ಉತ್ಪತ್ತಿಯಾಗುವ ಕಸವನ್ನು ವಿಲೇವಾರಿ ಮಾಡಲು ಗ್ರಾಮ ಪಂಚಾಯಿತಿಯು ಎರಡು ಎಕರೆ ಭೂಮಿಯನ್ನು ಮೀಸಲಿಟ್ಟಿದೆ. ತ್ಯಾಜ್ಯ ಸಂಗ್ರಹಕ್ಕೆ ಗುತ್ತಿಗೆ ಆಧಾರದಲ್ಲಿ ಒಂದು ವಾಹನ ಎರವಲು ಪಡೆಯಲಾಗಿದೆ. ಆದರೂ ಕಸವನ್ನು ರಸ್ತೆ ಬದಿ ಸುರಿಯಲಾಗುತ್ತಿದೆ’ ಎಂದು ಗ್ರಾಮದ ನಿವಾಸಿ ಸ್ವಾಮಿ ದೂರಿದರು.

‘ಕಸ ನಿರ್ವಹಣೆ ಕುರಿತು ತಾಲ್ಲೂಕು ಪಂಚಾಯಿತಿ ಇಒ ಮತ್ತು ಪಿಡಿಒಗೆ ಎರಡು ಬಾರಿ ಮನವಿ ನೀಡಿದ್ದೇವೆ. ಆದರೂ ಸಮಸ್ಯೆ ಬಗೆಹರಿಸುತ್ತಿಲ್ಲ’ ಎಂದು ಗ್ರಾಮದಸ್ಫೂರ್ತಿ ಜನಸೇವಾ ಸಂಸ್ಥೆಯ ಅಧ್ಯಕ್ಷ ಕಿರಣ್ ಕುಮಾರ್ ಆರೋಪಿಸಿದರು.

‘ನಂದಿ ವೃತ್ತದ ಬಳಿ ಅಂಗನವಾಡಿ ಕೇಂದ್ರಕ್ಕೆ ಹೊಂದಿಕೊಂಡಂತೆ ಹಳ್ಳವಿದ್ದು, ಅದನ್ನು ಮುಚ್ಚಲು ಕಸ ಸುರಿಯಲಾಗಿದೆ. ಇದರಿಂದ ಜನರಿಗೆ ಸಮಸ್ಯೆಯಾಗುತ್ತಿರುವುದು ಗಮನಕ್ಕೆ ಬಂದಿದೆ. ಕಸವನ್ನು ವಿಲೇವಾರಿ ಘಟಕಕ್ಕೆ ಸಾಗಿಸಲು ಸೂಚಿಸುತ್ತೇನೆ’ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷ ನಟರಾಜ್ ‘ಪ್ರಜಾವಾಣಿ’ಗೆ ತಿಳಿಸಿದರು.

ಈ ಬಗ್ಗೆ ಪ್ರತಿಕ್ರಿಯೆ ಪಡೆಯಲು ಪಿಡಿಒಗೆ ಕರೆ ಮಾಡಿದರೂ ಸ್ವೀಕರಿಸಲಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT