ಶುಕ್ರವಾರ, ಅಕ್ಟೋಬರ್ 23, 2020
27 °C

ಬೀಟೆ ಮರದ 8 ದಿಮ್ಮಿ ವಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹುಣಸೂರು: ಮರಗಳ್ಳರು ತೋಟದಲ್ಲಿ ಬಚ್ಚಿಟ್ಟಿದ್ದ ಬೀಟೆ ಮರದ ದಿಮ್ಮಿಯನ್ನು ಅರಣ್ಯ ಇಲಾಖೆ ಗುರುವಾರ ರಾತ್ರಿ ದಾಳಿ ನಡೆಸಿ ವಶಪಡಿಸಿಕೊಂಡಿದೆ.

ನಗರದ ಕಾಫಿ ವರ್ಕ್ಸ್ ಬಳಿಯ ಅಡಿಕೆ ತೆಂಗಿನ ತೋಟದಲ್ಲಿ ಬೀಟೆ ಮರದ ದಿಮ್ಮಿ ಸಂಗ್ರಹಿಸಿಟ್ಟ ಮಾಹಿತಿ ಮೇಲೆ  ದಾಳಿ ನಡೆಸಿದ ಅಧಿಕಾರಿಗಳು ಸಂಗ್ರಹಿಸಿದ್ದ 8 ಮರದ ದಿಮ್ಮಿಯನ್ನು ವಶಕ್ಕೆ ಪಡೆದರು.

ಈ ಸಂಬಂಧ ತೋಟದ ಮಾಲೀಕರು ತಮಗೆ ಮರ ಸಂಗ್ರಹಿಸಿಟ್ಟಿರುವ ಬಗ್ಗೆ ಯಾವುದೇ ಮಾಹಿತಿ ಇಲ್ಲ. ನಡುರಾತ್ರಿ ಟ್ರಾಕ್ಟರ್ ಓಡಾಡುತ್ತಿದ್ದ ಶಬ್ದ ಕೇಳಿಸಿತ್ತು ಎಂದು ತಿಳಿಸಿದ್ದಾರೆ.

ಪ್ರಾದೇಶಿಕ ಅರಣ್ಯ ಇಲಾಖೆ ವಲಯ ಅರಣ್ಯಾಧಿಕಾರಿ ಸಂದೀಪ್ ನೇತೃತ್ವದಲ್ಲಿ ಜಪ್ತಿ ಮಾಡಿ ಇಲಾಖೆ ವಶಕ್ಕೆ ತೆಗೆದುಕೊಳ್ಳಲಾಗಿದೆ. ವಶಪಡಿಸಿಕೊಂಡ ಬೀಟೆ ಮರವನ್ನು ಕಲ್ಲಬೆಟ್ಟ ಮರ ಸಂಗ್ರಹ ಸ್ಥಳಕ್ಕೆ ರವಾನಿಸಲಾಗಿದೆ.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.