ಭಾನುವಾರ, ನವೆಂಬರ್ 29, 2020
22 °C

ಸದಾಶಿವಾನಂದ ಸ್ವಾಮೀಜಿಗೆ ಅಭಿನಂದನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮೈಸೂರು: ಗದುಗಿನ ಶಿವಾನಂದ ಬೃಹನ್ಮಠದ ನೂತನ ಪೀಠಾಧಿಪತಿ ಸದಾಶಿವಾನಂದ ಸ್ವಾಮೀಜಿ ಅವರನ್ನು ಸೋಮವಾರ ಇಲ್ಲಿ ನಡೆದ ಕಾರ್ಯ ಕ್ರಮದಲ್ಲಿ ಅಭಿನಂದಿಸಲಾಯಿತು.

ಸುತ್ತೂರು ಶಾಖಾ ಮಠದಲ್ಲಿ ನಡೆದ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ವಹಿಸಿದ್ದರು.

ಕನಕಪುರ ದೇಗುಲ ಮಠದ ಮುಮ್ಮಡಿ ನಿರ್ವಾಣ ಸ್ವಾಮೀಜಿ, ವಾಟಾಳು ಸೂರ್ಯಸಿಂಹಾಸನ ಮಠದ ಡಾ.ಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ, ಕುಂದೂರು ಮಠದ ಶರತ್‌ ಚಂದ್ರ ಸ್ವಾಮೀಜಿ ಪಾಲ್ಗೊಂಡಿ ದ್ದರು. ಕಾರ್ಯಕ್ರಮವನ್ನು ಮೈಸೂರು ವಿಶ್ವವಿದ್ಯಾಲಯದ ಕುಲಪತಿ  ಪ್ರೊ.ಜಿ. ಹೇಮಂತಕುಮಾರ್ ಉದ್ಘಾಟಿಸಿದರು.

ಜಯರಾಜೇಂದ್ರ ಸ್ವಾಮೀಜಿ, ಸಾಹಿತಿ ಪ್ರೊ.ಮಲೆಯೂರು ಗುರುಸ್ವಾಮಿ, ನಿವೃತ್ತ ಪ್ರಾಧ್ಯಾಪಕ ಪ್ರೊ.ಕೆ.ಅನಂತರಾಮು, ಕುವೆಂಪು ಕನ್ನಡ ಅಧ್ಯಯನ ಕೇಂದ್ರದ ಪ್ರಾಧ್ಯಾಪಕ ಪ್ರೊ.ನೀಲಗಿರಿ ಎಂ.ತಳವಾರ, ಡಾ.ಸಿ.ಪಿ.ರಾಮಶೇಷ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.