9 ಸಾಗುವಾನಿ ಮರ ಕಳವು

ಬುಧವಾರ, ಮೇ 22, 2019
29 °C
ಮೇಟಿಕುಪ್ಪೆ ವನ್ಯಜೀವಿ ವಲಯದಲ್ಲಿ ಕೃತ್ಯ

9 ಸಾಗುವಾನಿ ಮರ ಕಳವು

Published:
Updated:
Prajavani

ಎಚ್.ಡಿ.ಕೋಟೆ: ತಾಲ್ಲೂಕಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಮೇಟಿಕುಪ್ಪೆ ವನ್ಯಜೀವಿ ವಲಯದ ಸೋರೆಕುಪ್ಪೆ ಬೀಟ್‌ನ ಕಲ್ಲಹಳ್ಳ– ಗುಡಿಹಳ್ಳದ ಬಳಿ ಲಕ್ಷಾಂತರ ರೂಪಾಯಿ ಮೌಲ್ಯದ 9 ಸಾಗುವಾನಿ ಮರಗಳನ್ನು ಕಳವು ಮಾಡಲಾಗಿದೆ.

ಸ್ಥಳಕ್ಕೆ ಮುಖ್ಯ ಅರಣ್ಯಾಧಿಕಾರಿ ನಾರಾಯಣಸ್ವಾಮಿ, ಅರಣ್ಯ ಸಂಚಾರಿ ದಳದ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ 8 ರಿಂದ 10 ಅಡಿ ಉದ್ದದ 2ರಿಂದ 3 ಅಡಿ ಸುತ್ತಳತೆಯ 8 ಮರದ ತುಂಡುಗಳನ್ನು ವಶಕ್ಕೆ ಪಡೆದಿದ್ದಾರೆ.

ಮರಗಳ್ಳರು ಒಣಗಿದ್ದ 9 ಸಾಗುವಾನಿ ಮರಗಳನ್ನು ಕತ್ತರಿಸಿ ಸಾಗಿಸುವ ಸಂದರ್ಭದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ದಾಳಿ ನಡೆಸಿದ್ದಾರೆ. ಆದರೆ, ಮರಗಳ್ಳರನ್ನು ಬಂಧಿಸಲು ಸಾಧ್ಯವಾಗಿಲ್ಲ. ಇಲಾಖೆ ಸಿಬ್ಬಂದಿಯ ನಿರ್ಲಕ್ಷ್ಯವೂ ಇದಕ್ಕೆ ಕಾರಣವಾಗಿದೆ ಎಂದು ಮೇಲ್ನೋಟಕ್ಕೆ ಕಂಡು ಬಂದಿದೆ. ಪ್ರಕರಣದಲ್ಲಿ ಇಲಾಖೆಯ ಕೆಲವರ ಕೈವಾಡ ಇದೆ ಎಂದು ಶಂಕಿಸಲಾಗಿದೆ ಎಂದು ನಾರಾಯಣಸ್ವಾಮಿ ತಿಳಿಸಿದರು.

‘ಪ್ರಕರಣದ ತನಿಖೆ ನಡೆಸುವಂತೆ ಅಂತರಸಂತೆ ವನ್ಯಜೀವಿ ವಲಯದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗೆ ಆದೇಶ ಕೊಟ್ಟಿದ್ದೇನೆ. ಇಲಾಖೆಯವರು ಶಾಮೀಲಾಗಿದ್ದರೆ ಅವರನ್ನು ಸೇವೆಯಿಂದ ಅಮಾನತು ಮಾಡಲಾಗುವುದು’ ಎಂದು ಹೇಳಿದರು.

ಮೇಟಿಕುಪ್ಪೆ ವನ್ಯಜೀವಿ ವಲಯದಲ್ಲಿ ಇತ್ತೀಚೆಗೆ ನಿರಂತರವಾಗಿ ಮರಗಳ್ಳತನವಾಗುತ್ತಿದೆ. ಅರಣ್ಯ ಇಲಾಖೆ ಸಿಬ್ಬಂದಿ ಎಚ್ಚರಿಕೆ ವಹಿಸುತ್ತಿಲ್ಲ. ಕಳ್ಳ ಬೇಟೆ ತಡೆ ಶಿಬಿರಗಳು ಕೂಡ ಸರಿಯಾಗಿ ಕೆಲಸ ನಿರ್ವಹಿಸುತ್ತಿಲ್ಲ. ಇದರಿಂದ ಕಳ್ಳಕಾಕರಿಗೆ ಮರ ಕಡಿಯಲು ಅನುಕೂಲವಾಗಿದೆ ಎಂದು ಪರಿಸರ ಪ್ರೇಮಿ ಹೇಮಂತ್ ಆರೋಪಿಸಿದ್ದಾರೆ.

ಈ ಪ್ರಕರಣದಲ್ಲಿ ಪಟ್ಟಣ ಸೇರಿದಂತೆ ಸುತ್ತಮುತ್ತಲ ಇರುವ ಸಾಮಿಲ್ ಮಾಲೀಕರ ಕೈವಾಡ ಇರಬಹುದು. ಈ ಬಗ್ಗೆ ಇಲಾಖೆಯ ಅಧಿಕಾರಿಗಳು ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

20 ದಿನಗಳ ಹಿಂದೆ ಮೇಟಿಕುಪ್ಪೆ ವನ್ಯಜೀವಿ ವಲಯದ ಅಗಸನಹುಂಡಿ ವಿಭಾಗದಲ್ಲಿ 6 ಸಾಗುವಾನಿ ಮರಗಳನ್ನು ಕಳವು ಮಾಡಲಾಗಿತ್ತು.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !