ಮೈಸೂರು: ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ, ಬಿಜೆಪಿಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಜತೆ ಬೆಂಗಳೂರಿನಲ್ಲಿ ರಹಸ್ಯ ಮಾತುಕತೆ ನಡೆಸಿದ್ದಾರೆ ಎಂಬುದು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಜಿ.ಟಿ.ಡಿ ಸ್ಥಳೀಯರು ಸೇರಿದಂತೆ ರಾಜ್ಯ ಬಿಜೆಪಿ ಮುಖಂಡರ ಜತೆ ಸುಮಧುರ ಸಂಬಂಧ ಹೊಂದಿರುವುದು, ಬಿಜೆಪಿ ಪರ ಮೃದು ಧೋರಣೆ ಹೊಂದಿರುವುದು ಈಗಾಗಲೇ ಜಗಜ್ಜಾಹೀರುಗೊಂಡಿದೆ.

ಸಂತೋಷ್ ಜತೆ ಜಿ.ಟಿ.ದೇವೇಗೌಡ ಇದೀಗ ಮಾತುಕತೆ ನಡೆಸಿದ್ದು, ಬಿಜೆಪಿಗೆ ಶೀಘ್ರದಲ್ಲೇ ಸೇರ್ಪಡೆಯಾಗಲಿದ್ದಾರಾ ? ಎಂಬ ಕುತೂಹಲವನ್ನು ಕೆರಳಿಸಿದೆ.

ಈ ಬಗ್ಗೆ ಪ್ರತಿಕ್ರಿಯೆಗಾಗಿ ಜಿ.ಟಿ.ಡಿ. ಸಂಪರ್ಕಿಸಲು ಯತ್ನಿಸಿದರೂ ಲಭ್ಯವಾಗಲಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.