ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೋಹಿಣಿ ಸಿಂಧೂರಿ ವರ್ತನೆ ಅಕ್ಷಮ್ಯ: ಸಾ.ರಾ.ಮಹೇಶ್

Last Updated 13 ಜನವರಿ 2021, 20:14 IST
ಅಕ್ಷರ ಗಾತ್ರ

ಮೈಸೂರು: ಇಲ್ಲಿನ ಜಿಲ್ಲಾ ಪಂಚಾಯಿತಿಯಲ್ಲಿ ಮಂಗಳವಾರ ನಡೆದ ವಿಧಾನಸಭಾ ಕಾಗದ ಪತ್ರಗಳ ಸಮಿತಿಯ ಸಭೆಯಲ್ಲಿ ಸದಸ್ಯರನ್ನು ಸ್ವಾಗತಿಸದೇ ಇರುವುದಕ್ಕೆ ಸಮಿತಿ ಅಧ್ಯಕ್ಷ ಸಾ.ರಾ.ಮಹೇಶ್ ಟ್ವಿಟರ್‌ನಲ್ಲಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

‘ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ವರ್ತನೆ ಅಕ್ಷಮ್ಯ. ಪ್ರಾಮಾಣಿಕ ಅಧಿಕಾರಿ ಎಂದು ಬಿಂಬಿಸಿಕೊಳ್ಳುತ್ತಿರುವ ಇವರು ಜನಪ್ರತಿನಿಧಿಗಳ ಮೇಲೆ ಸವಾರಿ ಮಾಡಲು ಹೊರಟಿದ್ದಾರೆ. ಸಾಂವಿಧಾನಿಕ ಸಂಸ್ಥೆಗಳು, ಸಮಿತಿಗಳಿಗೆ ಯಾವ ರೀತಿ ಅಧಿಕಾರಿಗಳು ಶಿಷ್ಟಾಚಾರ ಪಾಲಿಸಬೇಕೆಂದು ಸರ್ಕಾರ ಹೊರಡಿಸಿರುವ ಸುತ್ತೋಲೆಗಳನ್ನು ಓದಿ ಮೊದಲು ಅರ್ಥಮಾಡಿಕೊಳ್ಳಲಿ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಾಸನದಲ್ಲಿ ಜಿಲ್ಲಾಧಿಕಾರಿಯಾಗಿದ್ದಾಗ ತಮ್ಮ ದಿಢೀರ್ ವರ್ಗಾವಣೆಗೆ ನ್ಯಾಯ ಕೇಳಲು ‘ಕೆಎಟಿ’ಗೆ ಹೋಗಿದ್ದ ಇದೇ ಅಧಿಕಾರಿ ಮೈಸೂರಿನಲ್ಲಿ ಉಲ್ಟಾ ಹೊಡೆದ ಕಥೆ ಇಡೀ ನಾಡಿಗೆ ಗೊತ್ತಿದೆ. ಇಂಥವರಿಂದ ಪಾಠ ಕಲಿಯಬೇಕಿಲ್ಲ ಎಂದಿರುವ ಅವರು, ‘ಮಾತಿನಲ್ಲಿ ಬ್ರಹ್ಮ ನೀತಿಯಲ್ಲಿ ಕ್ರೋಧಿ ಈ ಲೋಕದ ಭುಂಜಕರು ನಾ ಹೆಚ್ಚು ತಾ ಹೆಚ್ಚು ಎಂದು ನಡೆದಾಡುವರಯ್ಯ, ನಾನು ನೀನೆಂಬ ಉಭಯವಳಿದು ತಾನು ತಾನಾದುದ ನಾನಾರನೂ ಕಾಣೆನಯ್ಯ ಝೇಂಕಾರ ನಿಜಲಿಂಗಪ್ರಭುವೆ’ ಎಂಬ ಜಕ್ಕಣಯ್ಯ ಎಂಬ ವಚನಾಕಾರರ ವಚನವನ್ನು ಟ್ವಿಟರ್‌ನಲ್ಲಿ ಪ್ರಸ್ತಾಪಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT