ಶನಿವಾರ, 15 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ಯುವತಿಯ ಮೇಲೆ 6 ಮಂದಿಯಿಂದ ಸಾಮೂಹಿಕ ಅತ್ಯಾಚಾರ

Last Updated 25 ಆಗಸ್ಟ್ 2021, 13:29 IST
ಅಕ್ಷರ ಗಾತ್ರ

ಮೈಸೂರು: ಚಾಮುಂಡಿಬೆಟ್ಟದ ತಪ್ಪಲಿನ ಲಲಿತಾದ್ರಿಪುರದ ನಿರ್ಜನ ಪ್ರದೇಶದಲ್ಲಿ ಯುವತಿಯೊಬ್ಬರ ಮೇಲೆ ಮಂಗಳವಾರ ರಾತ್ರಿ ಸಾಮೂಹಿಕ ಅತ್ಯಾಚಾರ ನಡೆದಿದೆ. ಈ ಕುರಿತ ಪ್ರಕರಣ ದಾಖಲಾಗಿದೆ.

'ಮೈಸೂರು ನಗರದಲ್ಲಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದು, ಪ್ರಕರಣದ ತನಿಖೆಯ ಮೇಲುಸ್ತುವಾರಿಗೆ ಹಿರಿಯ ಪೊಲೀಸ್‌ ಅಧಿಕಾರಿಗಳ ತಂಡವನ್ನು ಕಳುಹಿಸಲಾಗಿದೆ' ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.

ಘಟನೆ ನಡೆದ ಸ್ಥಳಕ್ಕೆ ಡಿಸಿಪಿ ಪ್ರದೀಪಗುಂಟಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಪ್ರಜಾವಾಣಿಗೆ ಪ್ರತಿಕ್ರಿಯಿಸಿದ ಸ್ಥಳಿಯ ನಿವಾಸಿ ಸಬಿತಾ, ಘಟನೆ ನಡೆದಿದೆ ಎನ್ನಲಾದ ಸ್ಥಳದಲ್ಲಿ ಬೀದಿದೀಪ ಬೇಕು ಎಂದು ಮನವಿ ಮಾಡಿದ್ದೆ. ಆದರೆ ಯಾರೂ ನನ್ನ ಮನವಿಯನ್ನು ಪರಿಗಣಿಸಲಿಲ್ಲ ಎಂದು ತಿಳಿಸಿದ್ದಾರೆ.

ಯುವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ 6 ಮಂದಿ ಈ ಕೃತ್ಯ ಎಸಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT