ಭಾನುವಾರ, 10 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಮಹಾತ್ಮರ ಚರಿತಾಮೃತ’ಕ್ಕೆ ಶಿವರಾತ್ರೀಶ್ವರ ಪ್ರಶಸ್ತಿ

Last Updated 8 ಆಗಸ್ಟ್ 2022, 14:09 IST
ಅಕ್ಷರ ಗಾತ್ರ

ಮೈಸೂರು: ಶಿವರಾತ್ರೀಶ್ವರ ಧಾರ್ಮಿಕ ದತ್ತಿಯಿಂದ ಕೊಡ ಮಾಡುವ 2021ನೇ ಸಾಲಿನ ಶಿವರಾತ್ರೀಶ್ವರ ಪ್ರಶಸ್ತಿಗೆ ಬೆಳಗಾವಿ ಜಿಲ್ಲೆ ಅಥಣಿಯ ಮೋಟಗಿ ಮಠದ ಪೀಠಾಧ್ಯಕ್ಷ ಪ್ರಭುಚನ್ನಬಸವ ಸ್ವಾಮೀಜಿ ಅವರ ‘ಮಹಾತ್ಮರ ಚರಿತಾಮೃತ’ ಕೃತಿ ಆಯ್ಕೆಯಾಗಿದೆ.

ಪ್ರಶಸ್ತಿಯು ₹ 25ಸಾವಿರ ಗೌರವಧನ ಮತ್ತು ಪ್ರಶಸ್ತಿಫಲಕ ಒಳಗೊಂಡಿದೆ.

‘ಪ್ರಭುಚನ್ನಬಸವ ಶ್ರೀ, ಸಂಸ್ಕೃತ ಮತ್ತು ಕನ್ನಡ ಎಂ.ಎ. ಸ್ನಾತಕೋತ್ತರ ಪದವೀಧರರು. ಸುತ್ತೂರು ಮಠದ ಗುರುಕುಲ ಹಾಗೂ ಶಿವಯೋಗ ಮಂದಿರದಲ್ಲಿ ಅಧ್ಯಾತ್ಮ ಸಾಧನೆ ಕೈಗೊಂಡವರು. ಸಾಮಾಜಿಕ ಮತ್ತು ಧಾರ್ಮಿಕ ಕೈಂಕರ್ಯಗಳಲ್ಲಿ ಸಕ್ರಿಯವಾಗಿ ತೊಡಗಿದ್ದಾರೆ. ಸಾಹಿತ್ಯ ಕ್ಷೇತ್ರದಲ್ಲಿ ವಿಶೇಷ ಅಭಿರುಚಿ ಹೊಂದಿದ್ದಾರೆ. 20 ಕೃತಿಗಳನ್ನು ರಚಿಸಿದ್ದಾರೆ. 30 ಸಿ.ಡಿ.ಗಳನ್ನು ಹೊರತಂದಿದ್ದಾರೆ. ಅವರ ಸಾಹಿತ್ಯ ಸೇವೆಗೆ ಅನೇಕ ಪ್ರಶಸ್ತಿ–ಪುರಸ್ಕಾರಗಳು ಸಂದಿವೆ. ಅವರು ರಚಿಸಿರುವ, 216 ವಿಶ್ವವಿಭೂತಿಗಳ ಜೀವನ ಹಾಗೂ ಸಾಧನೆಗಳನ್ನು ಪರಿಚಯಿಸುವ ‘ಮಹಾತ್ಮರ ಚರಿತಾಮೃತ’ ಕೃತಿಗೆ ಪುರಸ್ಕಾರ ನೀಡಲಾಗುತ್ತಿದೆ’ ಎಂದು ಪ್ರಕಟಣೆ ತಿಳಿಸಿದೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT