ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದಲ್ಲಿ ಅತ್ಯಂತ ಕಠಿಣ ಅರಣ್ಯ ಕಾನೂನು: ಶೋಭಾ ಕರಂದ್ಲಾಜೆ ಬೇಸರ

Last Updated 17 ಆಗಸ್ಟ್ 2021, 7:21 IST
ಅಕ್ಷರ ಗಾತ್ರ

ಮೈಸೂರು: ‘ಅರಣ್ಯ ಸಂರಕ್ಷಣೆಗೆ ಸಂಬಂಧಿಸಿದ ಕಾನೂನುಗಳು ಕರ್ನಾಟಕ ರಾಜ್ಯದಲ್ಲಿ ಬಹಳಷ್ಟು ಕಠಿಣವಾಗಿವೆ. ರೈತರು ತಮ್ಮ ಸ್ವಂತ ಜಮೀನಿನಲ್ಲಿ ಬೆಳೆಸಿದ ಮರ ಕಡಿಯಲೂ ಸಾಧ್ಯವಾಗದ ಪರಿಸ್ಥಿತಿ ಇದೆ. ಇದರಿಂದ ರೈತರಿಗೆ ತೊಂದರೆ ಉಂಟಾಗುತ್ತಿದೆ’ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಬೇಸರ ವ್ಯಕ್ತಪಡಿಸಿದರು.

‘ಕೇಂದ್ರ ಸರ್ಕಾರವು ಅರಣ್ಯ ಕೃಷಿಗೆ ಹೆಚ್ಚು ಉತ್ತೇಜನ ನೀಡುತ್ತಿದೆ. ರೈತರು ತಮ್ಮ ಜಮೀನಿನಲ್ಲಿ ಬೆಳೆದಿರುವ ಶ್ರೀಗಂಧ ಸೇರಿದಂತೆ ಎಲ್ಲಾ ರೀತಿಯ ಮರಗಳನ್ನು ಕಡಿದು ಸಾಗಾಟ ಮಾಡುವುದಕ್ಕೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಈಗಿರುವ ಕಾಯ್ದೆ ಸಡಿಲಗೊಳಿಸುವ ‍ಪ್ರಯತ್ನವನ್ನು ಪ್ರಧಾನಿ ಮೋದಿ ನಡೆಸುತ್ತಿದ್ದಾರೆ’ ಎಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ರಾಜ್ಯದಲ್ಲೂ ಕಾನೂನು ಸಡಿಲಗೊಳಿಸಬೇಕು. ಮರ ಕಡಿಯಲು ರೈತರಿಗೆ ಅವಕಾಶವಿಲ್ಲವೆಂದರೆ ಬೆಳೆಯಲು ಮನಸ್ಸು ಮಾಡುತ್ತಾರೆಯೇ? ಈ ಸಂಬಂಧ ಅರಣ್ಯ ಸಚಿವ ಉಮೇಶ್‌ ಕತ್ತಿ ಜೊತೆ ಚರ್ಚಿಸಿದ್ದೇನೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT