ಮಂಗಳವಾರ, ನವೆಂಬರ್ 30, 2021
22 °C

ಮೈಸೂರಿನಲ್ಲಿ ಸ್ಥಳೀಯರಿಗೆ ಉದ್ಯೋಗ ನೀಡಿ: ನಾಗರಿಕ ಹಿತರಕ್ಷಣಾ ವೇದಿಕೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮೈಸೂರು: ‘ನಗರದ ಖಾಸಗಿ ಅಂಗಡಿ ಮಳಿಗೆಗಳು ಹೊಸ ರಾಜ್ಯದವರಿಗೆ ಉದ್ಯೋಗ ನೀಡುವ ಮೂಲಕ ಸ್ಥಳೀಯರಿಗೆ ಅನ್ಯಾಯ ಮಾಡುತ್ತಿವೆ’ ಎಂದು ಕನ್ನಡ ಪರ ಸಂಘಟನೆಯ ನಾಗರಿಕ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಮಂಜುನಾಥ್‌ ದೂರಿದರು.

‘ಆಭರಣ ಮಳಿಗೆಗಳು, ಅಪಾರ್ಟ್‌ಮೆಂಟ್‌ಗಳೂ ಸೇರಿದಂತೆ ವಿವಿಧೆಡೆ ಕೇರಳ ಹಾಗೂ ರಾಜಸ್ಥಾನದಿಂದ ಬಂದವರಿಗೆ ಉದ್ಯೋಗ ನೀಡುತ್ತಿದ್ದು, ಕನ್ನಡಿಗರನ್ನು ಕಡೆಗಣಿಸಲಾಗುತ್ತಿದೆ. ಅವರಿಗೂ ಉದ್ಯೋಗ ನೀಡಲಿ. ಆದರೆ, ಕನ್ನಡಿಗರಿಗೆ ಹೆಚ್ಚು ಪ್ರಾಶಸ್ತ್ಯ ನೀಡಬೇಕು’ ಎಂದು ಸೋಮವಾರ ಇಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.

‌‘ಮಳಿಗೆಗಳ ನಾಮಫಲಕಗಳಲ್ಲಿ ಕನ್ನಡವನ್ನು ನಿರ್ಲಕ್ಷ್ಯಿಸಲಾಗಿದೆ. ಅನ್ಯ ಭಾಷೆಯಲ್ಲಿ ದೊಡ್ಡದಾಗಿ ಬರೆಯಲಾಗಿದೆ. ನವೆಂಬರ್‌ 1ರೊಳಗೆ ನಾಮಫಲಕಗಳನ್ನು ಕಡ್ಡಾಯವಾಗಿ ಕನ್ನಡದಲ್ಲಿ ಬರೆದಿರಬೇಕು. ಇಲ್ಲದಿದ್ದರೆ ಮಸಿ ಬಳಿಯುವ ಅಭಿಯಾನ ಆಯೋಜಿಸಬೇಕಾಗುತ್ತದೆ’ ಎಂದು ಎಚ್ಚರಿಸಿದರು.

ಗೋಷ್ಠಿಯಲ್ಲಿ ಉಪಾಧ್ಯಕ್ಷ ನಾಗರಾಜ್‌, ಮಹೇಶ್‌, ಬಾಲಕೃಷ್ಣೇಗೌಡ, ರಾಮಪ್ರಕಾಶ್‌ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು