ಶುಕ್ರವಾರ, ಡಿಸೆಂಬರ್ 3, 2021
20 °C

ಸಿದ್ದರಾಮಯ್ಯ ಅವರನ್ನು ಅಫ್ಗಾನಿಸ್ತಾನಕ್ಕೆ ಕಳುಹಿಸಬೇಕು: ಶ್ರೀನಿವಾಸ್ ಪ್ರಸಾದ್ 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: 'ತಾಲಿಬಾನ್ ಆಡಳಿತ ಹೇಗಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಖುದ್ದಾಗಿ ತಿಳಿದು ಕೊಳ್ಳಬೇಕಾಗಿದೆ. ಹಾಗಾಗಿ ಅವರನ್ನು ಒಂದು ತಿಂಗಳ ಕಾಲ ತಾಲಿಬಾನ್ ಆಡಳಿತವಿರುವ ಅಫ್ಗಾನಿಸ್ತಾನಕ್ಕೆ ತಕ್ಷಣವೇ ಕಳುಹಿಸಿ ಕೊಡಬೇಕಾಗಿದೆ' ಎಂದು ಸಂಸದ ವಿ.ಶ್ರೀನಿವಾಸ ಪ್ರಸಾದ್ ಸಲಹೆ ನೀಡಿದರು.

ಆರ್.ಎಸ್. ಎಸ್.‌ಮುಖಂಡ ಮ.ವೆಂಕಟರಾಮು ಅಭಿನಂದನಾ ಸಮಿತಿ ಹಾಗೂ ಪ್ರಲಕ್ಷ ಚಾರಿಟಬಲ್ ಟ್ರಸ್ಟ್ ವತಿಯಿಂದ ಮಾನಸ ಗಂಗೋತ್ರಿಯ ಸೆನೆಟ್ ಭವನದಲ್ಲಿ ಶನಿವಾರ ಆಯೋಜಿಸಿದ್ದ 'ಮ.ವೆಂಕಟರಾಮು ಅವರ ಅಭಿನಂದನಾ ಕಾರ್ಯಕ್ರಮ'ದಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಪ್ರಜಾಪ್ರಭುತ್ವದಲ್ಲಿ ಆಡಳಿತ ಪಕ್ಷ, ವಿರೋಧ ಪಕ್ಷಗಳಿಗೆ ಜವಾಬ್ದಾರಿ ಇದೆ. ವಿರೋಧ ಪಕ್ಷದ ನಾಯಕರಾದವರು ವಿವೇಚನೆಯಿಂದ ಜವಾಬ್ದಾರಿಯುತವಾಗಿ ಮಾತನಾಡಬೇಕು. ಆದರೆ, ದೇಶದ ಪ್ರಧಾನಿ ಬಗ್ಗೆ ಬೇಜವಾಬ್ದಾರಿತನದಿಂದ ಅವಹೇಳನಕಾರಿಯಾಗಿ ಮಾತನಾಡುವುದು ಸರಿಯಲ್ಲ ಎಂದು ಕಿಡಿಕಾರಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು