ಶುಕ್ರವಾರ, ಸೆಪ್ಟೆಂಬರ್ 17, 2021
26 °C
ಭಾವಚಿತ್ರಕ್ಕೆ ಹಾಲಿನ ಅಭಿಷೇಕ; ಬಡವರಿಗೆ ಆಹಾರ ಕಿಟ್ ವಿತರಣೆ

ಸಿದ್ದರಾಮಯ್ಯ ಜನ್ಮದಿನ; ಬೆಂಬಲಿಗರಿಂದ ಸಂಭ್ರಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮೈಸೂರು: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಜನ್ಮದಿನದ ಪ್ರಯುಕ್ತ ಗುರುವಾರ ನಗರದ ಹಲವೆಡೆ ಬೆಂಬಲಿಗರು ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಂಡರು.

ಕಾಡಾ ಕಚೇರಿ ಸಮೀಪ ಸಿದ್ದರಾಮಯ್ಯ ಕಟೌಟ್‌ಗೆ ಹಾಲಿನ ಅಭಿಷೇಕ ಮಾಡಿದರು. ನಗರ ಜಿಲ್ಲಾ ಕಾಂಗ್ರೆಸ್ ಹಾಗೂ ರಾಜ್ಯ ಕರ್ನಾಟಕ ರಾಜ್ಯ ಸಿದ್ದರಾಮಯ್ಯ ಅಭಿಮಾನಿಗಳ ಬಳಗದವರು ಕಾಂಗ್ರೆಸ್ ಭವನದಲ್ಲಿ ಬಡವರಿಗೆ ದಿನಸಿ ಕಿಟ್ ವಿತರಿಸಿದರು.

ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್, ಸ್ವಾತಂತ್ರ್ಯ ಹೋರಾಟಗಾರ ಪುಟ್ಟಣ್ಣ, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಜೆ.ವಿಜಯಕುಮಾರ್ ಮಾತನಾಡಿದರು. ಪಕ್ಷದ ನಗರ ಘಟಕದ ಅಧ್ಯಕ್ಷ ಆರ್.ಮೂರ್ತಿ, ಕೆಪಿಸಿಸಿ ವಕ್ತಾರ ಎಚ್.ಎ.ವೆಂಕಟೇಶ್, ಉಪಾಧ್ಯಕ್ಷ ರಾಜರಾಂ, ಪಾಲಿಕೆ ಮಾಜಿ ಸದಸ್ಯ ನಾಗಭೂಷಣ್, ಬಳಗದ ಅಧ್ಯಕ್ಷ ಹಿನಕಲ್ ಪ್ರಕಾಶ್, ಮುಖಂಡ ಹರೀಶ್‌ಗೌಡ ಇದ್ದರು.

ವಿಮಾ ಬಾಂಡ್ ವಿತರಣೆ: ನಗರ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಮುಖಂಡರು 74 ಅಸಂಘಟಿತ ಕಾರ್ಮಿಕರಿಗೆ ತಲಾ ₹ 1 ಲಕ್ಷ ವೌಲ್ಯದ ಮರಣ ವಿಮೆ ಹಾಗೂ ಅಂಗಾಂಗಳ ವೈಫಲ್ಯ ವಿಮಾ ಬಾಂಡ್‌ ವಿತರಿಸಿದರು.

ಪಾಲಿಕೆ ಮಾಜಿ ಸದಸ್ಯ ಶಿವಣ್ಣ, ಕಾಂಗ್ರೆಸ್ ಮುಖಂಡರಾದ ಚೌಡಹಳ್ಳಿ ಪುಟ್ಟಸ್ವಾಮಿ, ವಿಶ್ವನಾಥ್, ಕಾರ್ಯಕ್ರಮ ಆಯೋಜಕ ಎಂ.ಕೆ.ಅಶೋಕ್ ಇದ್ದರು.

ಅಲ್ಲಲ್ಲಿ: ರಾಜ್ಯ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರೇಖಾ ಶ್ರೀನಿವಾಸ್ ಆಶಾ ಕಾರ್ಯಕರ್ತೆಯರನ್ನು ಸನ್ಮಾನಿಸಿದರು. ಚೌಹಳ್ಳಿ ಪುಟ್ಟಸ್ವಾಮಿ ಚಿಕ್ಕಹರದನಹಳ್ಳಿಯ ಛಾಯಾದೇವಿ ಆಶ್ರಮದ ಮಕ್ಕಳೊಂದಿಗೆ ಕೇಕ್ ಕತ್ತರಿಸಿದರು. ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ಉಪಾಹಾರ ನೀಡಿದರು.

ರಾಕೇಶ್ ಸಿದ್ದರಾಮಯ್ಯ ಅಭಿಮಾನಿ ಬಳಗದ ಅಧ್ಯಕ್ಷ ವಿಶ್ವನಾಥ್, ಮುಖಂಡರಾದ ಕೃಷ್ಣಪ್ಪ, ನಾಗರಾಜು ಇದ್ದರು. ಕಾಂಗ್ರೆಸ್ ಹಿಂದುಳಿದ ವರ್ಗದವರ ವಿಭಾಗದಿಂದ ಕೆ.ಆರ್.ಆಸ್ಪತ್ರೆಯ ಕಲ್ಲು ಕಟ್ಟಡದಲ್ಲಿರುವ ಒಳರೋಗಿಗಳಿಗೆ ಬೆಡ್‌ಶಿಟ್ ವಿತರಿಸಲಾಯಿತು.

ಚಾಮುಂಡಿಪುರಂ ಅರುಣೋದಯ ವಿಶೇಷ ಮಕ್ಕಳ ಶಾಲೆಯಲ್ಲಿ ಅಭಿಮಾನಿಗಳು ಮಕ್ಕಳೊಂದಿಗೆ ಕೇಕ್ ಕತ್ತರಿಸಿದರು. ಬಳಗದ ರಾಜೇಶ್ ರಾಜಾ, ಪುನೀತ್, ಭಾಸ್ಕರ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.