ಸಿಎಂ ಸ್ಥಾನದಲ್ಲಿ ಸಿದ್ದರಾಮಯ್ಯ: ಪುಟ್ಟರಂಗಶೆಟ್ಟಿ

ಮಂಗಳವಾರ, ಜೂನ್ 18, 2019
23 °C

ಸಿಎಂ ಸ್ಥಾನದಲ್ಲಿ ಸಿದ್ದರಾಮಯ್ಯ: ಪುಟ್ಟರಂಗಶೆಟ್ಟಿ

Published:
Updated:

ಮೈಸೂರು: ‘ಎಚ್‌.ಡಿ.ಕುಮಾರಸ್ವಾಮಿ ಅವರು ಈ ರಾಜ್ಯದ ಮುಖ್ಯಮಂತ್ರಿ. ಆದರೆ ನಾನು ಆ ಸ್ಥಾನದಲ್ಲಿ ಸಿದ್ದರಾಮಯ್ಯ ಅವರನ್ನು ನೋಡುತ್ತೇನೆ’ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ.

ಭಾನುವಾರ ಸುದ್ದಿಗಾರರ ಜತೆ ಮಾತನಾಡಿ, ಮೈತ್ರಿಯಲ್ಲಿ ಯಾವುದೇ ಗೊಂದಲ ಇಲ್ಲ. ಸರ್ಕಾರಕ್ಕೆ ಯಾವುದೇ ಅಪಾಯವಿಲ್ಲ ಎಂದರು. ಪುಟ್ಟರಂಗಶೆಟ್ಟಿ ಅವರು ಈ ಹಿಂದೆ ‘ಸಿದ್ದರಾಮಯ್ಯ ಅವರೇ ನಮ್ಮ ಸಿ.ಎಂ’ ಎಂದಿದ್ದರು. ಇದೀಗ ಅದೇ ಮಾತನ್ನು ಪುನರುಚ್ಚರಿಸಿದ್ದಾರೆ.

ವಿಧಾನಪರಿಷತ್‌ ಸದಸ್ಯ ಬಸವರಾಜ್‌ ಹೊರಟ್ಟಿ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿ, ಹೊರಟ್ಟಿ ಅವರು ಹೇಳಿದಂತೆ ಯಾವುದೂ ನಡೆಯುವುದಿಲ್ಲ. ಇಲ್ಲಿ ದೇವೇಗೌಡ, ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ ಅವರ ಮಾತು ಮಾತ್ರ ನಡೆಯುತ್ತದೆ ಎಂದರು.

ತಪ್ಪೇನಿದೆ?: ಪುಟ್ಟರಂಗಶೆಟ್ಟಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಎಚ್‌.ಡಿ.ಕುಮಾರಸ್ವಾಮಿ, ‘ಕುಮಾರಣ್ಣ ಮುಖ್ಯಮಂತ್ರಿ ಸ್ಥಾನದಲ್ಲಿದ್ದಾರೆ. ಸಿದ್ದರಾಮಯ್ಯ ಅವರನ್ನು ಆ ಸ್ಥಾನದಲ್ಲಿ ನೋಡಲು ಇಷ್ಟಪಡುತ್ತೇನೆ ಎಂದು ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಅದರಲ್ಲಿ ತಪ್ಪೇನಿದೆ? ಸಿದ್ದರಾಮಯ್ಯ ನಾಯಕತ್ವದಡಿ ಗುರುತಿಸಿ ಅವರು ಮೇಲೆ ಬಂದಿದ್ದಾರೆ. ಅವರನ್ನು ನೆನಪಿಸಿಕೊಳ್ಳುವುದು ದೊಡ್ಡ ತಪ್ಪು ಎನ್ನುವ ರೀತಿಯಲ್ಲಿ ಟೀಕೆ ಮಾಡುವುದು ಸರಿಯಲ್ಲ' ಎಂದು ಹೇಳಿದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !