ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೌಶಲ ತರಬೇತಿ ಕಾರ್ಯಕ್ರಮ ಆಯೋಜಿಸಿ: ರೋಹಿಣಿ ಸಿಂಧೂರಿ ಸೂಚನೆ

‘ಕೌಶಲ ಮಿಷನ್’ ಸಭೆಯಲ್ಲಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೂಚನೆ
Last Updated 5 ನವೆಂಬರ್ 2020, 2:57 IST
ಅಕ್ಷರ ಗಾತ್ರ

ಮೈಸೂರು: ಜಿಲ್ಲಾ ಕೌಶಲಾಭಿವೃದ್ಧಿ ಕೇಂದ್ರದ ವತಿಯಿಂದ ಕೌಶಲ ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸಲು ಕೂಡಲೇ ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗ ಣದಲ್ಲಿ ಬುಧವಾರ ನಡೆದ ಜಿಲ್ಲಾ ಕೌಶಲ ಮಿಷನ್ ಕುರಿತ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಮೈಸೂರು ಹಾಗೂ ನಂಜನ ಗೂಡಿನಲ್ಲಿ ಹೊಸದಾಗಿ ಕೌಶಲಾಭಿವೃದ್ಧಿ ಕೇಂದ್ರ ಆರಂಭಿಸುವ ಮೂಲಕ ಉದ್ಯಮಶೀಲತೆಯನ್ನು ಹೆಚ್ಚಿಸಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಕೂಡಲೇ ಕಾರ್ಯಪ್ರವೃತ್ತರಾಗಬೇಕು ಎಂದು ತಿಳಿಸಿದರು.

ಕೋವಿಡ್-19 ಕಾರಣ ಕೌಶಲಾ ಭಿವೃದ್ಧಿ ಚಟುವಟಿಕೆ ಕುಂಠಿತವಾಗಿದೆ. ಜಿಲ್ಲೆಯ ಖಾಸಗಿ ಸಂಸ್ಥೆಗಳ ಸಹಕಾರದೊಂದಿಗೆ ನಿರಂತರವಾಗಿ ಕೌಶಲಾಭಿವೃದ್ಧಿ ಚಟುವಟಿಕೆಗಳನ್ನು ನಡೆಸಬೇಕು. ಮುಂದಿನ ದಿನಗಳಲ್ಲಿ ಉದ್ಯೋಗ ಅವಕಾಶಗಳನ್ನು ಆಧರಿಸಿ ಸಮೀಕ್ಷೆ ಕೈಗೊಂಡು ಜಿಲ್ಲಾ ಮಟ್ಟದ ಸಮಗ್ರ ಕ್ರಿಯಾ ಯೋಜನೆ ಸಿದ್ಧಪಡಿಸಬೇಕು ಎಂದರು‌.

ಆತ್ಮನಿರ್ಭರ ಭಾರತ ಅಭಿಯಾನದಡಿ ಪ್ರಧಾನ ಮಂತ್ರಿ ಆತ್ಮನಿರ್ಭರ ನಿಧಿಯಿಂದ ಬೀದಿ ಬದಿ ವ್ಯಾಪಾರಿಗಳಿಗೆ ನೀಡುತ್ತಿರುವ ಸಾಲ ಸೌಲಭ್ಯವು ಅರ್ಹ ಫಲಾನುಭವಿಗಳಿಗೆ ದೊರಕುವಂತೆ ಕ್ರಮವಹಿಸಿ ಎಂದು ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಕೌಶಲಾಭಿವೃದ್ಧಿ ಅಧಿಕಾರಿ ಬಿ.ಎಂ.ಶಿವಣ್ಣ, ಮಹಾನಗರ ಪಾಲಿಕೆಯ ಹೆಚ್ಚುವರಿ ಆಯುಕ್ತ ಶಶಿಕುಮಾರ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಮಹಂತೇಶಪ್ಪ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT