ಶುಕ್ರವಾರ, ಡಿಸೆಂಬರ್ 6, 2019
19 °C

ಸಾಹಿತ್ಯದ ಸಾಮಾಜಿಕ ಕ್ರಾಂತಿ ಮಾಡಿದ ಕುವೆಂಪು: ಪ್ರೊ.ಸಿ.ಪಿ.ಸಿದ್ದಾಶ್ರಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Deccan Herald

ಮೈಸೂರು: ಕನ್ನಡದ ಶ್ರೇಷ್ಠ ಸಾಹಿತಿ ಕುವೆಂಪು ಅವರು ಸಾಹಿತ್ಯದ ಮೂಲಕ ಸಾಮಾಜಿಕ ಕ್ರಾಂತಿಗೆ ನಾಂದಿ ಹಾಡಿದರು ಎಂದು ಸಾಹಿತಿ ಪ್ರೊ.ಸಿ.ಪಿ.ಸಿದ್ದಾಶ್ರಮ ಅಭಿಪ್ರಾಯಪಟ್ಟರು.

ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ಕುವೆಂಪು ಕಾವ್ಯಾಧ್ಯಯನ ಪೀಠವು ಮಂಗಳವಾರ ಹಮ್ಮಿಕೊಂಡಿದ್ದ ಕುವೆಂಪು ಅವರ ‘ಮಲೆಗಳಲ್ಲಿ ಮದುಮಗಳು’ ಕಾದಂಬರಿ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕುವೆಂಪು ಅವರು ತಮ್ಮ ಕಾವ್ಯ, ಕಥೆ, ಕಾದಂಬರಿ, ನಾಟಕ, ಪ್ರಬಂಧ ಸಾಹಿತ್ಯ ಮುಂತಾದ ತಮ್ಮ ಸಮಸ್ತ ಸಾಹಿತ್ಯದಲ್ಲಿ ಸಾಮಾಜಿಕ, ಆರ್ಥಿಕ, ರಾಜಕೀಯ ನೆಲೆಯ ಅಸಮಾನತೆ ಮತ್ತು ಶೋಷಣೆಯನ್ನು ಗುರುತಿಸಿ ಅದರ ನಿವಾರಣೆಗೆ ಸಕಾರಾತ್ಮಕವಾಗಿ ಶ್ರಮಿಸಿದ್ದಾರೆ. ಕನ್ನಡಿಗರ ಪ್ರಜ್ಞಾವಲಯಕ್ಕೆ ವಿಚಾರಕ್ರಾಂತಿಯ ಕರೆ ನೀಡಿದ ಕುವೆಂಪು ಹುಸಿಸಂಸ್ಕೃತಿಯ ಅಪಾಯ ತಿಳಿಸಿ, ಶ್ರಮಸಂಸ್ಕೃತಿಯ ಸತ್ವ ಮತ್ತು ಮಹತ್ವವನ್ನು ಬೆಳಕಿಗೆ ಹಿಡಿದು ಕನ್ನಡಿಗರಲ್ಲಿ ಸಾಮಾಜಿಕ, ಸಾಂಸ್ಕೃತಿಕ ಜಾಗೃತಿ ಮೂಡಿಸಿದ್ದಾರೆ ಎಂದು ವಿಶ್ಲೇಸಿದರು.

ಮೇಲ್ವರ್ಗದ ಶ್ರೀಮಂತರ ಪರವಹಿಸುತ್ತಿದ್ದ ಆಗಿನ ಬ್ರಿಟಿಷ್ ಸರ್ಕಾರದ ಸ್ವಾರ್ಥನಡೆ, ತಳವರ್ಗದವರಿಗೆ ಸ್ವಂತ ಬದುಕು ಇರಬಹುದೆಂಬ ಕಿಂಚಿತ್ ಅರಿವಿಲ್ಲದ ಜಮೀನ್ದಾರರ ವರ್ತನೆಗಳನ್ನು ಇದ್ದ ಹಾಗೆಯೇ ಚಿತ್ರಿಸಿದ್ದಾರೆ ಎಂದು ಹೇಳಿದರು.

ಸಂಸ್ಥೆಯ ನಿರ್ದೇಶಕ ಪ್ರೊ.ಎನ್.ಎಂ.ತಳವಾರ್ ಅವರು ಅಧ್ಯಕ್ಷತೆವಹಿಸಿದ್ದರು. ಸಂಸ್ಥೆಯ ಮತ್ತು ಇತರ ವಿಭಾಗಗಳ ಅಧ್ಯಾಪಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು