ಸೋಮವಾರ, ಆಗಸ್ಟ್ 8, 2022
21 °C

ರೆಸಾರ್ಟ್‌ ಮಾಲೀಕರಿಗೆ ಎಸ್‌.ಪಿ ಖಡಕ್ ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ರೆಸಾರ್ಟ್‌ಗಳಲ್ಲಿ ಯಾರೇ ಮಾದಕವಸ್ತು ಸೇವಿಸಿದರೂ ಅದಕ್ಕೆ ಮಾಲೀಕರನ್ನೇ ಹೊಣೆಗಾರರನ್ನಾಗಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್ ಖಡಕ್ ಎಚ್ಚರಿಕೆ ನೀಡಿದ್ದಾರೆ.

‌ಈಗಾಗಲೇ ಇವರು ಎಲ್ಲ ರೆಸಾರ್ಟ್‌ಗಳಿಗೂ ಸೂಚನಾ ಪತ್ರ ರವಾನಿಸಲಾಗಿದ್ದು, ರೆಸಾರ್ಟ್‌ಗಳಲ್ಲಿ ಗ್ರಾಹಕರು ಮಾದಕವಸ್ತು ಸೇವನೆ ಮಾಡುವುದು ಹಾಗೂ ಅದನ್ನು ಸಂಗ್ರಹಿಸಿಟ್ಟುಕೊಳ್ಳುವುದನ್ನು ತಡೆಯಬೇಕು. ಒಂದು ವೇಳೆ ತಪಾಸಣೆ ಸಮಯದಲ್ಲಿ ಯಾರಾದರೂ ಸಿಕ್ಕಿಬಿದ್ದರೆ ಅದಕ್ಕೆ ಮಾಲೀಕರನ್ನೇ ಹೊಣೆಗಾರರನ್ನಾಗಿಸಲಾಗುವುದು ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಅವರು, ‘ಕಬಿನಿ ಹಿನ್ನೀರು ಹಾಗೂ ಬೈಲಕುಪ್ಪೆ ವ್ಯಾಪ್ತಿ ಪ್ರದೇಶದ ಕೆಲವು ರೆಸಾರ್ಟ್‌ಗಳಲ್ಲಿ ಇಂತಹ ಕೃತ್ಯಗಳು ನಡೆಯುತ್ತಿವೆ ಎಂಬ ಅನುಮಾನ ಮೂಡಿದೆ. ಹಾಗಾಗಿ, ಎಲ್ಲ ರೆಸಾರ್ಟ್‌ ಮಾಲೀಕರಿಗೆ ಮುಂಚಿತವಾಗಿಯೇ ಎಚ್ಚರಿಕೆ ನೀಡಿದ್ದೇವೆ. ಆದಷ್ಟು ಶೀಘ್ರ ತಪಾಸಣೆ ನಡೆಸುತ್ತೇವೆ’ ಎಂದು ಹೇಳಿದರು.‌

ಮಾದಕವಸ್ತು ಸೇವನೆ ವಿರುದ್ಧ ಜಾಗೃತಿ ಮೂಡಿಸುವ ವಿಡಿಯೊ ಮಾಡಲಾಗಿದೆ. ಅದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಶೇರ್‌ ಮಾಡಲಾಗುವುದು ಎಂದರು.

ಜಿಲ್ಲೆಯ ಎಲ್ಲ ಪೊಲೀಸರಿಗೆ ಕೊರೊನಾ ಪರೀಕ್ಷೆ ನಡೆಸಲಾಗಿದೆ. ಇವರಲ್ಲಿ 313 ಮಂದಿಯನ್ನು ‘ರಿಸ್ಕ್’ ಎಂದು ಪರಿಗಣಿಸಲಾಗಿದೆ ಎಂದು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.