ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರು: ಶಾಸ್ತ್ರೀಯ ಕನ್ನಡ ಅಧ್ಯಯನ ಕೇಂದ್ರಕ್ಕೆ ಜಾಗ

Last Updated 5 ಸೆಪ್ಟೆಂಬರ್ 2020, 6:36 IST
ಅಕ್ಷರ ಗಾತ್ರ

ಮೈಸೂರು: ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರಕ್ಕೆ ಮೈಸೂರು ವಿಶ್ವವಿದ್ಯಾಲಯದ ಮಾನಸ ಗಂಗೋತ್ರಿಯ ಆವರಣದಲ್ಲಿ 4 ಎಕರೆ 2 ಗುಂಟೆ ಜಮೀನು ನೀಡಲು ವಿಶ್ವವಿದ್ಯಾಲಯದ ಸಿಂಡಿಕೇಟ್‌ ಸಭೆ ಶುಕ್ರವಾರ ಅನುಮೋದನೆ ನೀಡಿದೆ.

‘ಜಾಗ ನೀಡುವ ಕುರಿತು ಉನ್ನತ ಶಿಕ್ಷಣ ಇಲಾಖೆಗೆ ಪತ್ರ ಬರೆಯಲಾಗುವುದು’ ಎಂದು ಕುಲಪತಿ ಪ್ರೊ.ಜಿ.ಹೇಮಂತ್‌ಕುಮಾರ್ ತಿಳಿಸಿದರು.

ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರವು ಪ್ರಸ್ತುತ ಭಾರತೀಯ ಭಾಷಾ ಸಂಸ್ಥಾನದ ಅಧೀನದಲ್ಲೇ ಕಾರ್ಯ ನಿರ್ವಹಿಸುತ್ತಿದೆ. ಈ ಹಿಂದೆ, ಮಾನಸ ಗಂಗೋತ್ರಿಯ ಆವರಣದಲ್ಲಿರುವ 400X325 ಅಡಿ ಅಳತೆಯ ಕಟ್ಟಡ ಹಾಗೂ 3 ಎಕರೆ ಜಾಗವನ್ನು ಶಾಸ್ತ್ರೀಯ ಕನ್ನಡ ಕೇಂದ್ರಕ್ಕೆ ನೀಡಲಾಗಿತ್ತು. ಆದರೆ, ಆನಂತರದ ಬೆಳವಣಿಗೆಯಲ್ಲಿ ಈ ಜಾಗವನ್ನು ಹಿಂಪಡೆಯಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT