ಮತ ಚಲಾಯಿಸಿದವರಿಗೆ ವಿಶೇಷ ರಿಯಾಯಿತಿ

ಭಾನುವಾರ, ಏಪ್ರಿಲ್ 21, 2019
26 °C

ಮತ ಚಲಾಯಿಸಿದವರಿಗೆ ವಿಶೇಷ ರಿಯಾಯಿತಿ

Published:
Updated:

ಮೈಸೂರು: ಏಪ್ರಿಲ್ 18ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ಕಡ್ಡಾಯವಾಗಿ ಮತದಾನ ಮಾಡುವಂತೆ ಜನರನ್ನು ಪ್ರೇರೇಪಿಸುವ ಸಲುವಾಗಿ ಹೋಟೆಲ್ ಮಾಲೀಕರ ಸಂಘ ವಿಶೇಷ ರಿಯಾಯಿತಿ ಘೋಷಿಸಿದೆ.

ಮೊದಲ ಬಾರಿ ಮತ ಚಲಾಯಿಸಿದ ಯುವಕರಿಗೆ ಅಂದು ಹೋಟೆಲ್‌ಗಳಲ್ಲಿ ತಿಂಡಿ ತಿನಿಸುಗಳ ಮೇಲೆ ಶೇ 50ರಷ್ಟು ರಿಯಾಯಿತಿ ನೀಡಲಾಗುವುದು. ಮತ ಚಲಾಯಿಸಿ ಬಂದ 60 ವರ್ಷ ಮೀರಿದ ಹಿರಿಯ ನಾಗರಿಕರಿಗೆ ವಸತಿ ಗೃಹಗಳಲ್ಲಿ ಶೇ 50ರಷ್ಟು ರಿಯಾಯಿತಿ ಹಾಗೂ ಕೆಲವು ಹೋಟೆಲ್‌ಗಳಲ್ಲಿ ಸಾರ್ವಜನಿಕರಿಗೆ ಊಟೋಪಚಾರದ ಬಿಲ್‌ನಲ್ಲಿ ಶೇ 20ರಿಂದ 30ರಷ್ಟು ರಿಯಾಯಿತಿ ನೀಡಲಾಗುವುದು’ ಎಂದು ಸಂಘದ ಅಧ್ಯಕ್ಷ ಸಿ.ನಾರಾಯಣಗೌಡ ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಸಂಘದ ಪದಾಧಿಕಾರಿಗಳಾದ ಅನಿಲ್‌ಕುಮಾರ್, ಸುಬ್ರಹ್ಮಣ್ಯ, ಸತೀಶ್, ಮಹೇಶ್ ಕಾಮತ್, ಪುಟ್ಟಸ್ವಾಮಿ ಇದ್ದರು.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !