ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಗುವಿಗೆ ಜನ್ಮ ನೀಡಿದ ಅಂಗಾಂಗ ಕಸಿಗೆ ಒಳಗಾಗಿದ್ದ ಮಹಿಳೆ

Last Updated 14 ಜೂನ್ 2021, 17:14 IST
ಅಕ್ಷರ ಗಾತ್ರ

ಮೈಸೂರು: ಕಳೆದ 3 ವರ್ಷಗಳ ಹಿಂದೆ ಮೂತ್ರಪಿಂಡ ಮತ್ತು ಮೇದೋಜಿರಕ ಅಂಗಗಳ ಕಸಿಗೆ ಒಳಗಾಗಿದ್ದ 35 ವರ್ಷದ ಮಹಿಳೆಯೊಬ್ಬರು ಗಂಡು ಮಗುವಿಗೆ ಇಲ್ಲಿನ ಅಪೊಲೊ ಬಿಜಿಎಸ್‌ ಆಸ್ಪತ್ರೆಯಲ್ಲಿ ಜನ್ಮ ನೀಡಿದ್ದಾರೆ. ದೇಶದಲ್ಲೇ ಈ ಬಗೆಯ ಮೊದಲ ಪ್ರಕರಣ ಇದಾಗಿದೆ.

ಬಾಲ್ಯದಿಂದಲೇ ಮಧುಮೇಹಕ್ಕೆ ಒಳಗಾಗಿದ್ದ ಇವರು, ದೀರ್ಘಕಾಲದ ಮೂತ್ರಪಿಂಡ ಕಾಯಿಲೆ (ಸಿಕೆಡಿ)ಯಿಂದ ಬಳಲುತ್ತಿದ್ದರು. ಅಂಗಾಂಗ ವೈಫಲ್ಯದಿಂತ ಬಳಲುತ್ತಿದ್ದ ಇವರಿಗೆ 3 ವರ್ಷದ ಹಿಂದೆ ಏಕಕಾಲಕ್ಕೆ ಮೇದೋಜಿರಕ ಹಾಗೂ ಮೂತ್ರಪಿಂಡಗಳನ್ನು ಕಸಿ (ಎಸ್‌ಪಿಕೆಟಿ) ಮಾಡಲಾಗಿತ್ತು. ಇದೀಗ ಇವರ ಮಗುವಿಗೆ ‘ಬೆಳಕು’ ಎಂದು ಹೆಸರಿಡಲಾಗಿದೆ. ಅಂಗಾಂಗ ವೈಫಲ್ಯದಿಂದ ಬಳಲುವವರಿಗೆ ಈ ಪ್ರಕರಣ ಭರವಸೆ ತರುತ್ತದೆ.

ಕಸಿ ಶಸ್ತ್ರಚಿಕಿತ್ಸಕ ಕನ್ಸಲ್ಟೆಂಟ್ ಡಾ.ಸುರೇಶ್‌ ರಾಘವಯ್ಯ, ಸ್ತ್ರೀ ರೋಗ ತಜ್ಞರಾದ ಡಾ.ಬಿ.ಪಿ.ಅಂಜಲಿ, ಅರವಳಿಕೆ ತಜ್ಞರಾದ ಡಾ.ಅಂದಿತಾ ಮುಖರ್ಜಿ ಈ ಚಿಕಿತ್ಸಾ ತಂಡದಲ್ಲಿದ್ದರು ಎಂದು ಆಪೊಲೊ ಬಿಜಿಎಸ್ ಆಸ್ಪತ್ರೆಯ ಆಡಳಿತ ವಿಭಾಗದ ಉಪಾಧ್ಯಕ್ಷ ಎನ್.ಜಿ.ಭರತೀಶ್ ರೆಡ್ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT