ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ರೀರಂಗಪಟ್ಟಣ ದಸರಾ ಉದ್ಘಾಟನೆಗೆ ಎಸ್‌.ಎಂ.ಕೃಷ್ಣ

Last Updated 30 ಸೆಪ್ಟೆಂಬರ್ 2019, 13:14 IST
ಅಕ್ಷರ ಗಾತ್ರ

ಮಂಡ್ಯ: ಮೈಸೂರು ದಸರಾಕ್ಕೂ ಪುರಾತನವಾದ ಶ್ರೀರಂಗಪಟ್ಟಣ ದಸರಾ ಅ.3ರಿಂದ 5ರವರೆಗೆ ನಡೆಯಲಿದೆ. ಈ ಬಾರಿಯ ಉತ್ಸವವನ್ನು ಬಿಜೆಪಿಯ ಹಿರಿಯ ಮುಖಂಡ ಎಸ್‌.ಎಂ.ಕೃಷ್ಣ ಉದ್ಘಾಟಿಸಲಿದ್ದಾರೆ.

‘ಕಿರಂಗೂರಿನ ಬನ್ನಿಮಂಟಪದಲ್ಲಿ ಮಧ್ಯಾಹ್ನ 3 ಗಂಟೆಗೆ ನಂದಿಧ್ವಜ ಪೂಜೆ ನಡೆಯಲಿದೆ. ನಂತರ ನಾಡದೇವತೆ ಚಾಮುಂಡೇಶ್ವರಿ ದೇವಿಯ ಅಗ್ರಪೂಜೆ ಹಾಗೂ ಜಂಬೂ ಸವಾರಿ ಆರಂಭಗೊಳ್ಳಲಿದೆ. ಮೂರು ಆನೆಗಳು ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲಿವೆ. ಎಸ್‌.ಎಂ.ಕೃಷ್ಣ ಜಂಬೂಸವಾರಿಗೆ ಚಾಲನೆ ನೀಡಲಿದ್ದು ಸಚಿವರಾದ ಆರ್‌.ಅಶೋಕ್‌, ಸಿ.ಟಿ.ರವಿ, ವಿ.ಸೋಮಣ್ಣ, ಶಾಸಕ ರವೀಂದ್ರ ಶ್ರೀಕಂಠಯ್ಯ ಪಾಲ್ಗೊಳ್ಳಲಿದ್ದಾರೆ’ ಎಂದು ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್‌ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ಈ ಬಾರಿ ಉತ್ಸವದಲ್ಲಿ ವಿಶೇಷವಾಗಿ ಹೆಲಿಕಾಪ್ಟರ್‌ ಜಾಯ್‌ ರೈಡ್‌, ಕೆಆರ್‌ಎಸ್‌ ಹಿನ್ನೀರಿನಲ್ಲಿ ಜಲಸಾಹಸ ಕ್ರೀಡೋತ್ಸವ ಆಯೋಜನೆ ಮಾಡಲಾಗಿದೆ. ಬೃಂದಾವನದಲ್ಲಿ ಫಲಪುಷ್ಪ ಪ್ರದರ್ಶನ ನಡೆಯಲಿದ್ದು ನಾಲ್ವಡಿ ಕೃಷ್ಣರಾಜ ಒಡೆಯರ್‌ ಪ್ರತಿಮೆ ನಿರ್ಮಿಸಲಾಗುವುದು. ಜೊತೆಗೆ ಯುವದಸರಾ, ಗಾಳಿ ಪಟ ಉತ್ಸವ, ಆಹಾರ ಮೇಳ, ಪರಂಪರಾ ದರ್ಶನ, ಮಹಿಳಾ–ಮಕ್ಕಳ ದಸರಾ, ಕವಿಗೋಷ್ಠಿ ಆಯೋಜನೆ ಮಾಡಲಾಗಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT