ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರು | ಪರೀಕ್ಷಾ ಕೇಂದ್ರ ಸ್ಯಾನಿಟೈಸ್ ಮಾಡಿ: ಜಿಲ್ಲಾಧಿಕಾರಿ ಅಭಿರಾಮ್ ಸೂಚನೆ

Last Updated 19 ಜೂನ್ 2020, 15:25 IST
ಅಕ್ಷರ ಗಾತ್ರ

ಮೈಸೂರು: ‘ಪರೀಕ್ಷಾ ಕೇಂದ್ರಗಳನ್ನು ಪರೀಕ್ಷೆ ನಡೆಯುವ ಹಿಂದಿನ ದಿನ ಹಾಗೂ ಪರೀಕ್ಷೆ ಮಾಡಿದ ನಂತರ ಸ್ಥಳೀಯ ಸಂಸ್ಥೆಗಳ ವತಿಯಿಂದ ಸ್ಯಾನಿಟೈಸ್ ಮಾಡಿಸಬೇಕು’ ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ತಿಳಿಸಿದರು.

ಎಸ್ಸೆಸ್ಸೆಲ್ಸಿ ಪರೀಕ್ಷೆ ಹಿನ್ನೆಲೆಯಲ್ಲಿ ಶುಕ್ರವಾರ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ, ‘ಪ್ರತಿ ಪರೀಕ್ಷಾ ಕೇಂದ್ರದಲ್ಲೂ 200 ಮಕ್ಕಳಿಗೆ ಒಂದರಂತೆ ಆರೋಗ್ಯ ತಪಾಸಣೆ ಕೇಂದ್ರ ತೆರೆಯಬೇಕು. ಕಂಟೈನ್‍ಮೆಂಟ್ ವಲಯದಿಂದ ಪರೀಕ್ಷೆಗೆ ಬರುವ ಮಕ್ಕಳಿಗೆ ಎನ್-95 ಮಾಸ್ಕ್‌ಗಳನ್ನು ಒದಗಿಸಬೇಕು’ ಎಂದು ಸೂಚಿಸಿದರು.

ಸಾರಿಗೆ ವ್ಯವಸ್ಥೆ ಇಲ್ಲದ ಸ್ಥಳಗಳಲ್ಲಿರುವ ವಿದ್ಯಾರ್ಥಿಗಳನ್ನು ಕರೆ ತರಲು ಸರ್ಕಾರಿ ಇಲಾಖೆಯ ವಾಹನಗಳು, ಖಾಸಗಿ ಶಾಲೆಗಳ ವಾಹನಗಳನ್ನು ಬಳಸಿಕೊಳ್ಳುವಂತೆ ತಿಳಿಸಿದ ಜಿಲ್ಲಾಧಿಕಾರಿ, ಪರೀಕ್ಷೆಗೆ ಸಂಬಂಧಿಸಿದಂತೆ ಸುಳ್ಳು ವದಂತಿ ಹಬ್ಬಿಸುವವರ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

‘ಪರೀಕ್ಷೆ ಕಾರ್ಯಕ್ಕೆ ನಿಯೋಜಿಸುವ ಖಾಸಗಿ ಶಾಲಾ ವಾಹನಗಳ ಸುಸ್ಥಿತಿಯನ್ನು ಆರ್‌ಟಿಓ ಅಧಿಕಾರಿಗಳಿಂದ ಪರಿಶೀಲಿಸಿರಬೇಕು. ಪರೀಕ್ಷಾ ಕೇಂದ್ರಗಳಿಗೆ ಸೂಕ್ತ ಪೊಲೀಸ್ ವ್ಯವಸ್ಥೆ ಮಾಡಿ, ಮಕ್ಕಳು ದೈಹಿಕ ಅಂತರ ಕಾಯ್ದುಕೊಳ್ಳುವಂತೆ ನೋಡಿಕೊಳ್ಳಬೇಕು. ಪ್ರತಿ ವಿದ್ಯಾರ್ಥಿಯು ಆರೋಗ್ಯ ತಪಾಸಣೆಗೆ ಒಳಪಡುವುದರಿಂದ ಪರೀಕ್ಷಾ ಕೇಂದ್ರಕ್ಕೆ ನಿಗದಿತ ಸಮಯಕ್ಕಿಂತ 2 ಗಂಟೆ ಮುಂಚಿತವಾಗಿ ಬರಬೇಕಿದೆ’ ಎಂದು ಹೇಳಿದರು.

ಜಿ.ಪಂ.ಸಿಇಒ ಪ್ರಶಾಂತ್ ಕುಮಾರ್ ಮಿಶ್ರಾ, ಡಿಎಚ್‌ಒ ಡಾ.ಆರ್.ವೆಂಕಟೇಶ್, ಸಾರ್ವಜನಿಕರ ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕ ರಾಜೇಂದ್ರ, ಡಿಡಿಪಿಐ ಡಾ.ಪಾಂಡುರಂಗ, ಎಸಿಪಿ ಎಂ.ಎಸ್.ಶಶಿಧರ್, ಬಿಇಒಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT