ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೋದಿ ಕಾರ್ಯಕ್ರಮಗಳಲ್ಲಿ ಲೋಪವಾಗದಂತೆ ಕ್ರಮಕ್ಕೆ ಸೂಚನೆ: ಸಚಿವ ಸೋಮಶೇಖರ್‌

Last Updated 18 ಜೂನ್ 2022, 13:15 IST
ಅಕ್ಷರ ಗಾತ್ರ

ಮೈಸೂರು: ‘ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿರುವ ಕಾರ್ಯಕ್ರಮಗಳಲ್ಲಿ ಯಾವುದೇ ಲೋಪವಾಗದಂತೆ, ಎಸ್‌ಜಿಪಿ ನಿರ್ದೇಶನದಂತೆ ಕ್ರಮ ಕೈಗೊಳ್ಳುವಂತೆ ಇಲ್ಲಿನ ಅಧಿಕಾರಿಗಳಿಗೆ ಸೂಚಿಸಲಾಗಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಟಿ. ಸೋಮಶೇಖರ್‌ ಅಧಿಕಾರಿಗಳಿಗೆ ಸೂಚಿಸಿದರು.

ಪ್ರಧಾನಿ ಆಗಮನ ಹಿನ್ನೆಲೆಯಲ್ಲಿ ಕಾರ್ಯಕ್ರಮಗಳ ಸ್ಥಳಗಳಿಗೆ ಶನಿವಾರ ಭೇಟಿ ನೀಡಿ ಪರಿಶೀಲಿಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು.

‘ಜೂನ್ 21ರಂದು ನಡೆಯುವ ಯೋಗ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಯೋಗಪಟುಗಳು ಬೆಳಗ್ಗೆ 5.30ಕ್ಕೆ ಆವರಣ ಪ್ರವೇಶಿಸಬೇಕು. ಎರಡು ಡೋಸ್ ಕೋವಿಡ್ ಲಸಿಕೆ ಹಾಕಿಸಿಕೊಂಡಿರಬೇಕು’ ಎಂದರು.

‘ಜೂನ್ 19ರಂದು ಅರಮನೆ ಆವರಣದಲ್ಲಿ ಅಂತಿಮ ಹಂತದ ಯೋಗ ತಾಲೀಮು ನಡೆಸಲಾಗುತ್ತದೆ’ ಎಂದು ಹೇಳಿದರು.

ಮಳೆ ಸಾಧ್ಯತೆ ಕುರಿತ ಪ್ರಶ್ನೆಗೆ, ‘ಹತ್ತು, ಹದಿನೈದು ವರ್ಷಗಳ ಇತಿಹಾಸ ಗಮನಿಸಿದರೆ ಬೆಳಿಗ್ಗೆ ವೇಳೆ ಮಳೆ ಬಂದ ನಿದರ್ಶನವಿಲ್ಲ. ಎಸ್‌ಜಿಪಿ ನಿರ್ದೇಶನದ ಅನುಸಾರ ಸಿದ್ಧತೆ ಕಾರ್ಯಗಳನ್ನು ಕೈಗೊಳ್ಳಲಾಗಿದೆ. ಮಹಾರಾಜ ಕಾಲೇಜು ಮೈದಾನದಲ್ಲಿ ಪ್ರಧಾನಿಯು ಕೇಂದ್ರ ಪುರಸ್ಕೃತ ಯೋಜನೆಗಳ‌ ಫಲಾನುಭವಿಗಳೊಂದಿಗೆ ಸಂವಾದ ನಡೆಸಲಿದ್ದಾರೆ. 20 ಜನ ಫಲಾನುಭವಿಗಳನ್ನು ಗುರುತಿಸಲಾಗಿದ್ದು ಯಾರೊಂದಿಗೆ ಬೇಕಾದರೂ ಸಂವಾದ ನಡೆಸಬಹುದು’ ಎಂದು ಹೇಳಿದರು.

‘15ಸಾವಿರ ಮಂದಿಗೆ ಯೋಗ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ನೀಡಲಾಗಿದೆ. ನಾಲ್ಕು ಗೇಟ್‌ಗಳ ಮೂಲಕ ಆವರಣ ಪ್ರವೇಶಿಸಬಹುದು. ವಾಹನಗಳನ್ನು ಸ್ಕ್ಯಾನಿಂಗ್ ಮಾಡಿದ ನಂತರವಷ್ಟೇ ನಿಲ್ದಾಣಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ. ಗಣ್ಯರಿಗೆ ಪ್ರತ್ಯೇಕ ಪ್ರವೇಶವಿರಲಿದೆ’ ಎಂದು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT