ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನ.2ರಂದು ರಾಜ್ಯದಾದ್ಯಂತ ಧರಣಿ

ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿಗೆ ಕುರುಬೂರು ಒತ್ತಾಯ
Last Updated 31 ಅಕ್ಟೋಬರ್ 2020, 4:56 IST
ಅಕ್ಷರ ಗಾತ್ರ

ಮೈಸೂರು: ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿಪಡಿಸುವಂತೆ ಒತ್ತಾಯಿಸಿ ನ.2 ರಂದು ರಾಜ್ಯದಾದ್ಯಂತ ಎಲ್ಲ ಜಿಲ್ಲಾ, ತಾಲ್ಲೂಕು ಕಚೇರಿಗಳ ಮುಂದೆ ಪ್ರತಿಭಟನೆ ನಡೆಸಲಾಗುವುದು ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಹೇಳಿದರು.

ಕಬ್ಬಿನ ಆರ್‌ಎಫ್‌ಪಿ ದರ ಕಳೆದ ವರ್ಷಕ್ಕಿಂತ ಕಡಿಮೆ ಆಗಿದೆ. ರಾಜ್ಯದಲ್ಲಿ ಎಸ್‌ಎಪಿ ಕಾಯ್ದೆ ಜಾರಿ ಬಂದ ಮೇಲೆ ಕಳೆದ ಮೂರು ವರ್ಷಗಳಿಂದ ಕಾರ್ಖಾನೆಗಳು ಸಕ್ಕರೆ ಇಳುವರಿ ಕಡಿಮೆ ತೋರಿಸಿ ರೈತರಿಗೆ ಅನ್ಯಾಯ ಮಾಡುತ್ತಿದೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ದೂರಿದರು.

ರಾಜ್ಯ ಸರ್ಕಾರ ಭತ್ತ ಖರೀದಿ ಕೇಂದ್ರ ಆರಂಭಿಸಲು ನಿರ್ಧರಿಸಿದೆ. ಆದರೆ ಖರೀದಿ ಮಾನದಂಡವನ್ನು ಬದಲಾ ಯಿಸಬೇಕು. ಪ್ರತಿ ರೈತನಿಂದ ಕನಿಷ್ಠ 100 ಕ್ವಿಂಟಲ್‌ ಭತ್ತ ಖರೀದಿ ಮಾಡಬೇಕು ಎಂದು ಎಂದು ಆಗ್ರಹಿಸಿದರು.

ಪರಿಹಾರ ನೀಡಿ: ಉತ್ತರ ಕರ್ನಾಟಕದಲ್ಲಿ ಪ್ರವಾಹದಿಂದ ಸಾಕಷ್ಟು ಬೆಳೆ ಹಾನಿಯಾಗಿದೆ. ಸುಮಾರು 184 ಹಳ್ಳಿಗಳು ಮುಳುಗಿವೆ. ಅಲ್ಲಿನ ಜನರ ಸ್ಥಳಾಂತರಕ್ಕೆ ಸರ್ಕಾರ ಕ್ರಮವಹಿ ಸಬೇಕು. ಉದ್ಯಮಿಗಳಿಗೆ ಗ್ರಾಮ ದತ್ತು ನೀಡುವ ಯೋಜನೆ ಜಾರಿಗೊಳಿಸಬೇಕು. ಈ ಯೋಜನೆಯಲ್ಲಿ ಭಾಗಿಯಾಗುವ ಉದ್ಯಮಿಗಳಿಗೆ ತೆರಿಗೆ ವಿನಾಯಿತಿ ನೀಡಬೇಕು ಎಂದು ಸಲಹೆ ನೀಡಿದರು.

ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರಕ್ಕೆ ಹಲವು ಸಲ ಮನವಿ ಮಾಡಿದರೂ ಯಾವುದೇ ಕ್ರಮ ಜಾರಿಯಾಗಿಲ್ಲ. ಆದ್ದರಿಂದ ನ.2 ರಂದ ಚಳವಳಿ ಮಾಡಲು ನಿರ್ಧರಿಸಲಾಗಿದೆ. ಮೈಸೂರು ಜಿಲ್ಲಾಧಿಕಾರಿ ಕಚೇರಿ ಮುಂದೆ ಬೆಳಿಗ್ಗೆ 11ಕ್ಕೆ ಧರಣಿ ಹಮ್ಮಿಕೊಳ್ಳಲಾಗಿದೆ ಎಂದರು.

ರೈತ ಮುಖಂಡರಾದ ಅತ್ತಹಳ್ಳಿ ದೇವರಾಜ್, ಕೆ.ಆರ್‌.ಎಸ್‌.ರಾಮೇಗೌಡ, ವೆಂಕಟೇಶ್‌, ನಾಗರಾಜ್‌ ಪಾಲ್ಗೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT