ಶನಿವಾರ, ಜೂಲೈ 4, 2020
28 °C

ರಕ್ಕಸ ಮಿಡತೆ ನಿಯಂತ್ರಣಕ್ಕೆ ಕಾರ್ಯತಂತ್ರ: ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ‘ಕೃಷಿ ಇಲಾಖೆಯೊಂದಿಗೆ ಜಂಟಿ ಕಾರ್ಯತಂತ್ರ ರೂಪಿಸಿ, ರಕ್ಕಸ ಮಿಡತೆಗಳ ನಿಯಂತ್ರಣಕ್ಕೆ ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಗುರುವಾರ ಇಲ್ಲಿ ತಿಳಿಸಿದರು.

‘ಉತ್ತರ ಭಾರತದಲ್ಲಿ ರಕ್ಕಸ ಮಿಡತೆಗಳು ಈಗಾಗಲೇ ಬೆಳೆ ನಾಶ ಮಾಡುತ್ತಿವೆ. ಇವು ರಾಜ್ಯ ಪ್ರವೇಶಿಸದಂತೆ ಅಗತ್ಯ ಕ್ರಮ ಜಾರಿಗೊಳಿಸುತ್ತೇವೆ’ ಎಂದು ತಮ್ಮನ್ನು ಭೇಟಿಯಾದ ಮಾಧ್ಯಮದವರಿಗೆ ಹೇಳಿದರು.

‘ಮಳೆಗಾಲ ನೋಡಿಕೊಂಡು ಮುಂಗಾರು ಹಂಗಾಮಿಗೆ ನೀರು ಕೊಡುವ ನಿರ್ಧಾರ ತೆಗೆದುಕೊಳ್ಳಲಾಗುವುದು. ಕಾವೇರಿ ಕಣಿವೆಯ ಜಲಾಶಯಗಳಿಂದ ನೀರು ಹರಿಸುವ ಅಧಿಕಾರ ನಮಗಿಲ್ಲ. ಜಲಾಶಯಗಳಲ್ಲಿನ ಸ್ಥಿತಿಗತಿ ಗಮನಿಸಿ, ಕೇಂದ್ರ ಜಲ ಆಯೋಗವೇ ತೀರ್ಮಾನ ತೆಗೆದುಕೊಳ್ಳಲಿದೆ. ಈ ನಿಟ್ಟಿನಲ್ಲಿ ಇಲಾಖೆಯ ಅಧಿಕಾರಿಗಳು ಈಚೆಗಷ್ಟೇ ಆಯೋಗ ನಡೆಸಿದ ವಿಡಿಯೊ ಕಾನ್ಫರೆನ್ಸ್‌ನಲ್ಲಿ ಭಾಗಿಯಾಗಿದ್ದಾರೆ’ ಎಂದು ಸಚಿವ ಜಾರಕಿಹೊಳಿ ತಿಳಿಸಿದರು.

ಹೈಕಮಾಂಡ್ ನಿರ್ಧಾರ: ‘ಎಚ್‌.ವಿಶ್ವನಾಥ್ ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡುವ ವಿಷಯದಲ್ಲಿ ಪಕ್ಷದ ಹೈಕಮಾಂಡ್, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದ್ದಾರೆ’ ಎಂದು ಸಚಿವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು