ಭಾನುವಾರ, ಮೇ 22, 2022
21 °C

ಶಾಲೆಗೆ ವಿದ್ಯಾರ್ಥಿಗೆ ಪ್ರವೇಶ: ಪ್ರತಿಭಟನೆ ಅಂತ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪಿರಿಯಾಪಟ್ಟಣ: ಜಿಲ್ಲಾಧಿಕಾರಿಗಳ ಆದೇಶ ಪಾಲಿಸಿದ ತಾಲ್ಲೂಕಿನ ಗಿರುಗೂರಿನ ಮಿಳಿಂದ ವಿದ್ಯಾ ಸಂಸ್ಥೆಯು ಗುರುವಾರ ಪರಿಶಿಷ್ಟ ಜಾತಿಯ ವಿದ್ಯಾರ್ಥಿಯನ್ನು ಶಾಲೆಗೆ 8ನೇ ತರಗತಿ ಪ್ರವೇಶಕ್ಕೆ ಅನುಮತಿ ನೀಡಿ ದಾಖಲು ಮಾಡಿಕೊಂಡಿದ್ದರಿಂದ ದಲಿತ ಸಂಘಟನೆಗಳ ಕಾರ್ಯಕರ್ತರು ವಾರದಿಂದ ನಡೆಸುತ್ತಿದ್ದ ಪ್ರತಿಭಟನೆಯನ್ನು ಮುಕ್ತಾಯಗೊಳಿಸಿದರು.

ಸಂಸ್ಥೆಯ ವಿರುದ್ಧ ನಡೆಸುತ್ತಿದ್ದ ಉಪವಾಸ ಸತ್ಯಾಗ್ರಹವನ್ನು ಕೈಬಿಡುವಂತೆ ತಹಶೀಲ್ದಾರ್ ಮತ್ತು ಬಿಇಒ ಮನವೊಲಿಸುವಲ್ಲಿ ಬುಧವಾರ ಯಶಸ್ವಿಯಾಗಿದ್ದರು.

ಶಾಲೆಯ ಆಡಳಿತ ಮಂಡಳಿ ವಿದ್ಯಾರ್ಥಿ ಯತೀಶ್‌ನಿಂದ ನಿಗದಿತ ಶುಲ್ಕ ಪಡೆದು ಶಾಲೆಗೆ ದಾಖಲು ಮಾಡಿಕೊಂಡಿದ್ದರಿಂದ ಒಂದು ವಾರದಿಂದ ಕಗ್ಗಂಟಾಗಿದ್ದ ಸಮಸ್ಯೆ ಬಗೆಹರಿಯಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು