ಗುರುವಾರ , ಅಕ್ಟೋಬರ್ 22, 2020
22 °C
ಕೋವಿಡ್‌ ಆತಂಕ–ದಸರಾ ಆಚರಣೆ ಸಂಬಂಧ ಮೈಸೂರಿಗೆ ತಜ್ಞರ ತಂಡ: ಆರೋಗ್ಯ ಸಚಿವ ಶ್ರೀರಾಮುಲು

24 ಗಂಟೆಯಲ್ಲಿ ಕ್ರಿಯಾ ಯೋಜನೆ ಸಲ್ಲಿಸಿ: ಆರೋಗ್ಯ ಸಚಿವ ಶ್ರೀರಾಮುಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮೈಸೂರು: ‘ಕೋವಿಡ್-19 ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸುರಕ್ಷಿತವಾಗಿ ದಸರಾ ಆಚರಿಸುವ ಸಂಬಂಧ ಆರೋಗ್ಯ ಇಲಾಖೆ ತಾಂತ್ರಿಕ ತಜ್ಞರ ತಂಡವನ್ನು ಮೈಸೂರಿಗೆ  ಕಳುಹಿಸಲಾಗುವುದು. ಈ ತಂಡ ವರದಿ ನೀಡಿದ 24 ಗಂಟೆಯೊಳಗೆ ಸ್ಥಳೀಯ ಅಧಿಕಾರಿಗಳು ಕ್ರಿಯಾ ಯೋಜನೆ ಸಿದ್ಧ ಪಡಿಸಬೇಕು’ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಸೂಚನೆ ನೀಡಿದರು.

ನಾಡಹಬ್ಬ ದಸರಾ ಮಹೋತ್ಸವ ಆಚರಣೆ ಹಿನ್ನೆಲೆಯಲ್ಲಿ ಕೊರೊನಾ ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮ ತೆಗೆದು ಕೊಳ್ಳುವ ವಿಚಾರ ವಾಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

ಮೈಸೂರಿನಲ್ಲಿ ಕೋವಿಡ್‌ ಪ್ರಕರಣಗಳು ತೀವ್ರಗತಿಯಲ್ಲಿ ಹೆಚ್ಚಾ ಗುತ್ತಿವೆ. ಇದನ್ನು ಮನಗಂಡು ಈ ಬಾರಿ ಸರಳ ಹಾಗೂ ಸಾಂಪ್ರದಾಯಿಕವಾಗಿ ದಸರೆ ಆಚರಣೆ ಮಾಡಲಾಗುವುದು. ಅದಕ್ಕಾಗಿ ದೀಪಾಲಂಕಾರ, ಸಾಂಸ್ಕೃತಿಕ ಕಾರ್ಯಕ್ರಮಗಳು ಇರಬೇಕೇ, ಎಷ್ಟು ಜನರು ಸೇರಿಸಬೇಕು ಎಂಬುದರ ಬಗ್ಗೆ ಸದ್ಯದಲ್ಲಿ ನಿರ್ಧಾರ ಕೈಗೊಳ್ಳಲಾಗುವುದು’ ಎಂದರು.

‘ಈ ವಿಚಾರವಾಗಿ ಆರೋಗ್ಯ ಇಲಾಖೆ ನಿರ್ದೇಶಕರ ನೇತೃತ್ವದ ತಾಂತ್ರಿಕ ತಜ್ಞರ ಸಮಿತಿ ಬಂದು ಮಾಹಿತಿ ಕಲೆಹಾಕಲಿದೆ. ಸಮಿತಿಯಲ್ಲಿ ಸ್ಥಳೀಯ ಅಧಿಕಾರಿಗಳೂ ಇರುತ್ತಾರೆ. ನಾಡಹಬ್ಬ ಆಚರಣೆ ವೇಳೆ ಸೋಂಕು ಹೆಚ್ಚಳವಾಗಿ ಏನಾದರೂ ಅನಾಹುತವಾದರೆ ಹೇಗೆ ನಿಭಾಯಿ ಸುತ್ತೀರಿ ಎಂಬ ಅಂಶ ಕ್ರಿಯಾ ಯೋಜನೆಯಲ್ಲಿ ಇರಬೇಕು. ಬಳಿಕ ಮುಖ್ಯಮಂತ್ರಿ ಜೊತೆ ಸಮಾಲೋಚನೆ ನಡೆಸಿ ಅಂತಿಮ ತೀರ್ಮಾನಕ್ಕೆ ಬರಲಾಗುವುದು’ ಎಂದರು.

‘ಸಾರ್ವಜನಿಕರು ಕೂಡ ಸರ್ಕಾ ರದ ಮೇಲೆ ಜವಾಬ್ದಾರಿ ಹಾಕಿ ಸುಮ್ಮನಿರಬಾರದು. ನಮಗೂ  ಜನರ ಸಹಕಾರ ಅಗತ್ಯವಾಗಿರುತ್ತದೆ. ಅಂತರ ಕಾಯ್ದುಕೊಂಡು, ಮಾಸ್ಕ್‌ ಧರಿಸಿ ಸುರಕ್ಷತೆಯಿಂದ ನಡೆಸಲು ಅವ ಕಾಶ ಮಾಡಿಕೊಡಿ’ ಎಂದು ಮನವಿ ಮಾಡಿದರು. 

ಮೈಸೂರು ನಗರದಲ್ಲಿ ಕೋವಿಡ್‌ಗೆ ಸಂಬಂಧಿಸಿದಂತೆ ಹಾಸಿಗೆ, ವೆಂಟಿಲೇಟರ್‌, ಸೋಂಕಿತರ ಸಂಖ್ಯೆಯ ಮಾಹಿತಿಯನ್ನು ಜಿಲ್ಲಾ ಆರೋ ಗ್ಯಾಧಿಕಾರಿ ಡಾ.ವೆಂಕಟೇಶ್ ಅವರಿಂದ ಪಡೆದುಕೊಂಡರು. ಸೋಂಕು ಪತ್ತೆ ಪ್ರಕ್ರಿಯೆ ಚುರುಕು ಪಡೆಯಬೇಕಿದೆ, ತ್ವರಿತಗತಿಯಲ್ಲಿ ಚಿಕಿತ್ಸೆ ನೀಡಬೇಕಿದೆ ಎಂದು ಸೂಚನೆ ನೀಡಿದರು.

ಕೋವಿಡ್ ಹೆಚ್ಚುತ್ತಿರುವ ಹಿನ್ನೆಲೆ ಯಲ್ಲಿ ದಸರಾ ಆಚರಣೆಯನ್ನು ತೀರಾ ಸರಳವಾಗಿ ಆಚರಿಸಬೇಕು ಎಂದು ಜನಪ್ರತಿನಿಧಿಗಳು ಸಲಹೆ ನೀಡಿದರು.

ಸಭೆಯಲ್ಲಿ ಸಂಸದ ಪ್ರತಾಪಸಿಂಹ, ಶಾಸಕರಾದ ತನ್ವೀರ್‌ ಸೇಠ್‌, ಬಿ.ಹರ್ಷವರ್ಧನ, ವಿಧಾನ ಪರಿಷತ್ ಸದಸ್ಯರಾದ ಎಚ್.ವಿಶ್ವನಾಥ್‌, ಜಿಲ್ಲಾ ಪಂಚಾಯತಿ ಅಧ್ಯಕ್ಷೆ ಪರಿಮಳಾ ಶ್ಯಾಂ, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಜಿಲ್ಲಾ ಪಂಚಾಯಿತಿ ಸಿಇಒ ಡಿ.ಭಾರತಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್, ಪಾಲಿಕೆ ಆಯುಕ್ತ ಗುರುದತ್ತ ಹೆಗಡೆ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು