ಗುರುವಾರ , ಜೂನ್ 24, 2021
25 °C

ಗೃಹಿಣಿ ಆತ್ಮಹತ್ಯೆ: ವರದಕ್ಷಿಣೆ ಕಿರುಕುಳ– ದೂರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಪಿರಿಯಾಪಟ್ಟಣ: ವರದಕ್ಷಿಣೆ ಕಿರುಕುಳಕ್ಕೆ ಗೃಹಿಣಿಯೊಬ್ಬಳು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪಟ್ಟಣದ ಗೊಲ್ಲರ ಬೀದಿಯಲ್ಲಿ ಗುರುವಾರ ನಡೆದಿದೆ.

ನಿಶಾ (24) ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ. 4 ವರ್ಷಗಳ ಹಿಂದೆ ಪಟ್ಟಣದ ವರ್ತಕ ಜಯಶೀಲ ಅವರ ಪುತ್ರ ಪ್ರದೀಪ್ ಅವರೊಂದಿಗೆ ವಿವಾಹವಾಗಿತ್ತು.

ಗಂಡನ ಮನೆಯವರು ಪದೇ ಪದೇ ಹಣಕ್ಕಾಗಿ ಪೀಡಿಸುತ್ತಿದ್ದರಿಂದ ಮನನೊಂದು ಮಗಳು  ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪೋಷಕರು ಪಟ್ಟಣದ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಪತಿ ಪ್ರದೀಪ್, ಮಾವ ಜಯಶೀಲ, ಅತ್ತೆ ಇಂದಿರಾ, ಮಗಳು ಸೌಮ್ಯ ವಿರುದ್ದ ಪ್ರಕರಣ ದಾಖಲಿಸಲಾಗಿದೆ.

ಮನೆಯ ಸುತ್ತ ಜನ ಸೇರಿದ್ದರಿಂದ ಸಿಪಿಐ ಬಿ.ಆರ್ ಪ್ರದೀಪ್, ಹುಣಸೂರು ಸಿಪಿಐ ಪೂವಯ್ಯ ನೇತೃತ್ವದಲ್ಲಿ ಪೊಲೀಸರು ಸೂಕ್ತ ಬಂದೋಬಸ್ತ್ ಕೈಗೊಂಡಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು