ಮಂಗಳವಾರ, ಮೇ 26, 2020
27 °C

ಆಕಸ್ಮಿಕ ಬೆಂಕಿ: 60 ಟನ್ ಕಬ್ಬು ನಾಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಂಪಾಪುರ: ಇಲ್ಲಿಗೆ ಸಮೀಪದ ಚಾಮಹಳ್ಳಿ ಗ್ರಾಮದಲ್ಲಿನ 2 ಎಕರೆಯಲ್ಲಿದ್ದ ಕಬ್ಬಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು, ಬೆಳೆ ಸಂಪೂರ್ಣ ಹಾಳಾಗಿದೆ.

ಚಾಮಹಳ್ಳಿ ಗ್ರಾಮದ ಚಲುವೇಗೌಡ ಜಯಮ್ಮ ಎಂಬುವರಿಗೆ ಸೇರಿದ ಕಬ್ಬಿನ ಗದ್ದೆ ಬೆಂಕಿಗಾಹುತಿಯಾಗಿದ್ದು, 60 ಟನ್ ಕಬ್ಬು ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.

ಶುಕ್ರವಾರ ರಾತ್ರಿ 8.30ರ ಸಮಯದಲ್ಲಿ ಬೆಂಕಿ ಬಿದ್ದಿರುವುದು ಗ್ರಾಮಸ್ಥರ ಗಮನಕ್ಕೆ ಬಂದಿದೆ. ಸ್ಥಳಕ್ಕೆ ಗ್ರಾಮಸ್ಥರು ಬರುವಷ್ಟರಲ್ಲಿ ಜಮೀನಿನ ಎಲ್ಲಾ ಭಾಗಕ್ಕೂ ಬೆಂಕಿ ಹರಡಿದ್ದರಿಂದ ನಂದಿಸಲು ಸಾಧ್ಯವಾಗಿಲ್ಲ. 15 ದಿನದ ಹಿಂದಷ್ಟೇ 50 ಟನ್ ಕಬ್ಬು ಕಟಾವು ಮಾಡಿ ಮಾರಲಾಗಿತ್ತು. ಉಳಿದ 60 ಟನ್ ಕಬ್ಬನ್ನು ಕೊರೊನಾ ವೈರಸ್‌ ಹರಡುತ್ತಿರುವುದರಿಂದ ಕಟಾವು ಮಾಡಲಾಗಿರಲಿಲ್ಲ ಎಂಬುದು ತಿಳಿದು ಬಂದಿದೆ.

ಬೆಂಕಿಗೆ ಬೆಳೆ ಕಳೆದುಕೊಂಡ ರೈತರಿಗೆ ಸರ್ಕಾರ ಪರಿಹಾರ ಒದಗಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು