ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವರ್ಚುಯಲ್‌ ದಸರೆಗೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸೂಚನೆ

ವಿಡಿಯೊ ಕಾನ್ಫರೆನ್ಸ್‌ನಲ್ಲಿ ಸಂವಾದ– ವಾರದಲ್ಲಿ ವರದಿ ಸಲ್ಲಿಸಿ
Last Updated 9 ಅಕ್ಟೋಬರ್ 2020, 3:58 IST
ಅಕ್ಷರ ಗಾತ್ರ

ಮೈಸೂರು: ದಸರಾ ಮಹೋತ್ಸವವನ್ನು ಈ ಬಾರಿ ಸರಳವಾಗಿ ಆಚರಿಸಲು ನಿರ್ಧರಿಸಲಾಗಿದ್ದು, ಕಾರ್ಯಕ್ರಮಗಳು ವರ್ಚುಯಲ್‌ (ಆನ್‌ಲೈನ್‌ ವೇದಿಕೆ) ಆಗಿ ನಡೆಯಲಿ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸೂಚನೆ ನೀಡಿದ್ದಾರೆ.

ಮೈಸೂರಿನಲ್ಲಿ ಹೆಚ್ಚುತ್ತಿರುವ ಕೋವಿಡ್‌ ಪ್ರಕರಣ ಹಾಗೂ ದಸರಾ ಆಚರಣೆ ಸಂಬಂಧ ಗುರುವಾರ ಬೆಂಗಳೂರಿನಿಂದ ವಿಡಿಯೊ ಕಾನ್ಫರೆನ್ಸ್‌ ಸಂವಾದದಲ್ಲಿ ಮಾತನಾಡಿ ಹಲವಾರು ಸಲಹೆ ನೀಡಿದರು. ನಾಡಹಬ್ಬದ ಆಚರಣೆಗೆ ಕೈಗೊಂಡಿರುವ ಸುರಕ್ಷತಾ ಕ್ರಮಗಳ ಬಗ್ಗೆ ಒಂದು ವಾರದಲ್ಲಿ ಪ್ರತ್ಯೇಕ ವರದಿ ನೀಡಬೇಕೆಂದು ಹೇಳಿದರು.

ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಟಿ.ಸೋಮಶೇಖರ್‌, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಜಿಲ್ಲಾ ಪಂಚಾಯಿತಿ ಸಿಇಒ ಡಿ.ಭಾರತಿ ಸೇರಿದಂತೆ ಹಲವು ಅಧಿಕಾರಿಗಳು ಮೈಸೂರಿನಿಂದ ಪಾಲ್ಗೊಂಡು ಇದುವರೆಗೆ ತೆಗೆದುಕೊಂಡಿರುವ ಕ್ರಮಗಳನ್ನು ವಿವರಿಸಿದರು.

ಸಚಿವ ಸೋಮಶೇಖರ್ ಮಾತನಾಡಿ, ‘ನಾಡಹಬ್ಬ ದಸರಾ ಆಚರಣೆಯನ್ನು ಸರಳ ಹಾಗೂ ಸುರಕ್ಷಿತವಾಗಿ ಆಚರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ‌. ಜಿಲ್ಲೆಗೆ ತಜ್ಞರ ತಂಡ ಬಂದು ನೀಡುವ ವರದಿಯ ಆಧಾರದ ಮೇಲೆ ಹೆಚ್ಚಿನ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುವುದು. ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಲಾಗುವುದು’ ಎಂದರು.

ಕೋವಿಡ್- 19 ನಿಯಂತ್ರಿಸುವುದಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಪ್ರಾಥಮಿಕ ಸಂಪರ್ಕಿತರನ್ನು ತ್ವರಿತವಾಗಿ ಗುರುತಿಸಿ ಅವರನ್ನು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ ಎಂದು ಹೇಳಿದರು.

ರೋಹಿಣಿ ಸಿಂಧೂರಿ ಅವರು ಜಿಲ್ಲೆಯಲ್ಲಿ ಕೋವಿಡ್‌ ನಿಯಂತ್ರಿಸುವ ನಿಟ್ಟಿನಲ್ಲಿ ಕೈಗೊಂಡಿರುವ ಕ್ರಮಗಳ ಬಗ್ಗೆ ಮುಖ್ಯಮಂತ್ರಿಗೆ ಮಾಹಿತಿ ನೀಡಿದರು.

ಜಿಲ್ಲೆಯ ಪ್ರತಿ ತಾಲ್ಲೂಕಿನ ಕೋವಿಡ್ ಆಸ್ಪತ್ರೆಗಳಲ್ಲಿ ಆಕ್ಸಿಜನ್‌ ಸಿಲಿಂಡರ್‌ಗಳನ್ನು ಹೆಚ್ಚಿಸುವ ಸಂಬಂಧ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದರು.

ನಗರ ಪೊಲೀಸ್‌ ಕಮೀಷನರ್‌ ಡಾ.ಚಂದ್ರಗುಪ್ತ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್, ಪಾಲಿಕೆ ಆಯುಕ್ತ ಗುರುದತ್ತ ಹೆಗಡೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT