ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೇಣು ಹಾಕಿಕೊಂಡು ಯುವಕ ಆತ್ಮಹತ್ಯೆ

Last Updated 24 ಅಕ್ಟೋಬರ್ 2018, 6:54 IST
ಅಕ್ಷರ ಗಾತ್ರ

ನಂಜನಗೂಡು: ನಗರದ ಕಪಿಲಾ ನದಿಯ ಹದಿನಾರುಕಾಲು ಮಂಟಪ ಸಮೀಪದ ಸ್ಮಶಾನದಲ್ಲಿ ಮಂಗಳವಾರ ಮೈಸೂರಿನ ವಿದ್ಯಾರಣ್ಯಪುರಂ ನಿವಾಸಿ ಕೆ.ಪಿ.ಸಂದೀಪ್ (29) ಎಂಬುವರು ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಶವದ ಪಕ್ಕದಲ್ಲೇ ಡೆತ್‌ನೋಟ್‌ ಸಿಕ್ಕಿದ್ದು, ‘ನನ್ನ ಸಾವಿಗೆ ನಾನೇ ಕಾರಣ’ ಎಂದು ಬರೆಯಲಾಗಿದೆ.

ಕೆ.ಪಿ.ಸಂದೀಪ್ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಲ್ಯಾಬ್‌ ಟೆಕ್ನಿಷಿಯನ್‌ ಕೆಲಸ ಮಾಡುತ್ತಿದ್ದರು. ಕುಡಿತದ ಚಟ ಹೊಂದಿದ್ದ ಅವರು ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ನಗರ ಪೊಲೀಸ್ ಠಾಣೆಯ ಪಿಎಸ್‌ಐ ಆನಂದ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT