ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರು ಜಿಲ್ಲಾ ಆರೋಗ್ಯಾಧಿಕಾರಿ ಕಚೇರಿ ಎದುರು ಮೃತದೇಹವಿಟ್ಟು ಪ್ರತಿಭಟನೆ

Last Updated 20 ಆಗಸ್ಟ್ 2020, 11:36 IST
ಅಕ್ಷರ ಗಾತ್ರ

ಮೈಸೂರು: ನಂಜನಗೂಡು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ನಾಗೇಂದ್ರ ಅವರ ಆತ್ಮಹತ್ಯೆಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತಕುಮಾರ್ ಮಿಶ್ರಾ ಕಾರಣ ಎಂದು ಆರೋಪಿಸಿರುವ ಸಂಬಂಧಿಕರು ಜಿಲ್ಲಾ ಆರೋಗ್ಯಾಧಿಕಾರಿ ಕಚೇರಿ ಎದುರು ನಾಗೇಂದ್ರ ಅವರ ಮೃತದೇಹ ಇಟ್ಟು ಪ್ರತಿಭಟನೆ ನಡೆಸುತ್ತಿದ್ದಾರೆ.

ಸಿಇಒ ನೀಡುತ್ತಿದ್ದ ಕೆಲಸದ ಒತ್ತಡ ಕಾರಣ, ಖಾಲಿ ಇರುವ ಹುದ್ದೆಗಳಿಂದ ಕಾರ್ಯನಿರ್ವಹಣೆ ಕಷ್ಟ ಆಗುತ್ತಿತ್ತು, ಸಿಇಒ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸಂಬಂಧಿಕರು ಕಿಡಿಕಾರಿದ್ದಾರೆ.

ಸಿಇಒ ಅಮಾನತು ಆಗುವವರೆಗೆ ಮೈಸೂರು ಜಿಲ್ಲೆಯ ಎಲ್ಲ ಸರ್ಕಾರಿ ವೈದ್ಯರು ಕೆಲಸದಿಂದ ದೂರ ಉಳಿಯಲು ನಿರ್ಧರಿಸಿದ್ದಾರೆ.

ಸಿಇಒ ಅವರು ಒಂದು ದಿನಕ್ಕೆ 300 ರ‍್ಯಾಪಿಡ್ಆ್ಯಂಟಿಜನ್ಟೆಸ್ಟ್ ಮಾಡದಿದ್ದರೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ ಮೇರೆಗೆ ಪ್ರಕರಣ ದಾಖಲಿಸುವ ಬೆದರಿಕೆಯನ್ನು ಎಲ್ಲ ತಾಲ್ಲೂಕಿನ ವೈದ್ಯಾಧಿಕಾರಿಗೆ ಒಡ್ಡುತ್ತಿದ್ದರು. ಎಷ್ಟೇ ಪ್ರಯತ್ನಿಸಿದರು ಈ ಗುರಿ ತಲುಪಲು ಸಾಧ್ಯವಾಗುತ್ತಿರಲಿಲ್ಲ ಎಂದು ವೈದ್ಯರು ಆರೋಪಿಸಿದ್ದಾರೆ.

ಮೃತದೇಹದ ಅಂತ್ಯಸಂಸ್ಕಾರ ನಡೆಸುವ ತೀರ್ಮಾನ ಸಂಬಂಧಿಕರಿಗೆ ಬಿಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT